ಶಹಾಬಾದ:ಗ್ರಾಪಂ ಚುನಾವಣೆಯಲ್ಲಿ ಜನರು ತಮ್ಮ ಮೇಲೆ ವಿಶ್ವಾಸವಿಟ್ಟು ತಮ್ಮನ್ನು ಗೆಲ್ಲಿಸಿದ್ದಾರೆ.ಅದನ್ನು ಅರಿತು ಗ್ರಾಮದ ಅಭಿವೃದ್ಧಿಗಾಗಿ ಕೆಲಸ ಮಾಡಿ ಜನರ ವಿಶ್ವಾಸವನ್ನು ಕಾಯ್ದಿಟ್ಟುಕೊಳ್ಳಿ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಯ್ಕೆಯಾದ ನೂತನ ಗ್ರಾಪಂ ಸದಸ್ಯರಿಗೆ ಆಯೋಜಿಸಲಾದ ಪ್ರಮಾಣ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಪಂ ಚುನಾವಣೆಯಲ್ಲಿ ಪಕ್ಷಗಳನ್ನು ನೋಡಿ ಆಯ್ಕೆ ಮಾಡದೇ, ನಿಮ್ಮ ಮೇಲೆ ವಿಶ್ವಾಸವಿಟ್ಟು ನಿಮ್ಮನ್ನು ಆಯ್ಕೆ ಮಾಡಿದ್ದಾರೆ.ಗ್ರಾಪಂಯಲ್ಲಿ ಪಕ್ಷಗಳನ್ನು ತರದೇ ಎಲ್ಲರೂ ಒಂದಾಗಿ ಗ್ರಾಮದ ಅಭಿವೃದ್ಧಿಗೆ ಮುಂದಾಗಬೇಕು.ಅದಕ್ಕಾಗಿ ಗ್ರಾಮದ ಅಭಿವೃದ್ಧಿಗಾಗಿ ಎಲ್ಲರೂ ಕೂಡಿ ನೀಲನಕ್ಷೆ ತಯ್ಯಾರಿಸಿ.ಆ ಯೋಜನೆಗೆ ತಕ್ಕಂತೆ, ಜನರ ಮೆಚ್ಚುಗೆಗ ತಕ್ಕಂತೆ ಕೆಲಸ ಮಾಡುವುದು ತಮ್ಮೆಲ್ಲರ ಕರ್ತವ್ಯ.ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಎಲ್ಲಾ ಸದಸ್ಯರು ತಮ್ಮ ಗ್ರಾಮವನ್ನು ತಾಲೂಕಿನಲ್ಲಿಯೇ ಮಾದರಿ ಗ್ರಾಮವನ್ನಾಗಿ ಮಾಡಬೇಕೆಂದು ಕಿವಿ ಮಾತು ಹೇಳಿದರು.ಅಲ್ಲದೇ ನೂತನವಾಗಿ ಆಯ್ಕೆಯಾದ ಗ್ರಾಪಂ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವತ್ತ ನಿಟ್ಟಿನಲ್ಲಿ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಾತನಾಡಿದ್ದೆನೆ.ಅವರು ಕೂಡ ತರಬೇತಿ ನೀಡುವತ್ತ ಸ್ಪಂದಿಸಿದ್ದಾರೆ.ತರಬೇತಿಯ ಲಾಭ ಪಡೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿರಿ ಎಂದು ತಿಳಿಸಿದರು.
ಚುನಾವಣಾಧಿಕಾರಿ ಬಸವರಾಜ ಕೊಳಕೂರ ಮಾತನಾಡಿ, ಜನರಿಂದ ಆಯ್ಕೆಯಾದ ತಾವು ಜನರಿಗೋಸ್ಕರ ಎಂದು ಮೊದಲು ತಿಳಿದುಕೊಳ್ಳಬೇಕು. ಗ್ರಾಮದ ಜನರಿಗೆ ಮೊದಲು ಮೂಲಸೌಲಭ್ಯಗಳಾದ ರಸ್ತೆ, ನೀರು, ಕರೆಂಟ ಹಾಗೂ ಸ್ವಚ್ಛತೆ ಇದ್ದರೇ ಸಾಕು ಮತ್ತೊಂದನ್ನು ಕೇಳುವ ಗೋಜಿಗೆ ಹೆಚ್ಚಿಗೆ ಗ್ರಾಮಸ್ಥರು ಹೋಗೋದಿಲ್ಲ.ಆದ್ದರಿಂದ ಗ್ರಾಮದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಗ್ರಾಪಂ ಎಲ್ಲಾ ನೂತನ ಸದಸ್ಯರಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಓ ಪ್ರಕಾಶಬಾಬು, ಸಿದ್ದು ಕಣದಾಳ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…