Monday, July 15, 2024
ಮನೆಬಿಸಿ ಬಿಸಿ ಸುದ್ದಿವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ 20ರ ವರೆಗೆ ಅವಧಿ ವಿಸ್ತರಣೆ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ 20ರ ವರೆಗೆ ಅವಧಿ ವಿಸ್ತರಣೆ

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಜನವರಿ 20 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.

ಪ್ರಥಮ ಪಿ.ಯು.ಸಿ. ಯಿಂದ ಪಿ.ಎಚ್.ಡಿ. ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಎಲ್ಲಾ ವೃತ್ತಿಪರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು www.scholarships.gov.in ನ್ಯಾಷನಲ್ ಸ್ಕಾಲರ್‍ಶಿಫ್ ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ http://scholarships.gov.xn--in-2sh3j6c8b/ www.dom.karnataka.gov.in ವೆಬ್‍ಸೈಟ್‍ದಿಂದ ಅಥವಾ ಕಲಬುರಗಿ ಮಿನಿ ವಿಧಾನ ಸೌಧದ 4ನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 08472-244006ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular