ಬಿಸಿ ಬಿಸಿ ಸುದ್ದಿ

ಕರ್ನಾಟಕ ಪ್ರಾಂತ ರೈತ ಸಂಘದ ನಾಲ್ಕು ದಿನ ಧರಣಿ

ಕಲಬುರಗಿ: ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನೆಡೆಯುತ್ತಿದೆ.

ಇವತ್ತಿಗೆ ನಾಲ್ಕು ದಿನಕ್ಕೆ ಕಾಲಿಟ್ಟಿದ್ದು ಇಂದು ಧರಣಿ ಸತ್ಯಾಗ್ರಹದಲ್ಲಿ ರೈತರು ಬೆಳೆದ ತೊಗರಿ ಬೇಳೆಯನ್ನು ಮುಖ್ಯಮಂತ್ರಿಗಳಿಗೆ, ಉಸ್ತುವಾರಿ ಸಚಿವರಿಗೆ, ಸಹಕಾರಿ ಸಚಿವರಿಗೆ ಹಾಗೂ ಸ್ಥಳೀಯ ಶಾಸಕರಿಗೆ ೫೦೦ ಗ್ರಾ,  ಉಚಿತವಾಗಿ ದಾನ ಮಾಡಿ, ಪೋಸ್ಟ್ ಮೂಲಕ ಅವರ ಮನೆಗಳಿಗೆ ಕಳುಹಿಸಿ ಕೊಡಲಾಯಿತು.

ಮತ್ತು ಈ ಕೂಡಲೇ ಬೇಡಿಕೆ ಈಡೇರಿಸಲು ಆಗ್ರಹಿಸಿದರು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳೆಯಾದ ತೊಗರಿಗೆ ೨೦೦೦ ರೂ ಪ್ರೋತ್ಸಾಹ ಧನ ನೀಡಬೇಕು, ಉದ್ಯೋಗ ಖಾತರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಣೆ ಹಾಗೂ ದಿನದ ಕೂಲಿ ೪೨೫ ರೂ ಹೆಚ್ಚಿಸಬೇಕು ಮಹಾನಗರ ಪಾಲಿಕೆಯಲ್ಲಿ ಕಸ ಗುಡಿಸುವ ೨೭೨ ಪೌರ ಕಾರ್ಮಿಕರಿಗೆ ಮನೆ ನಿವೇಶ ನೀಡಬೇಕು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಅಪೌಷ್ಟಿಕತೆಯಿಂದ ಶಿಶು ಮರಣ ಪ್ರಮಾಣ ಹೆಚ್ಚಾಗಿದ್ದು ಇದನ್ನು ತಡೆಗಟ್ಟಲು ಸರ್ಕಾರ ರೇಷನ್ ಅಂಗಡಿಗಳ ಮೂಲಕ ೩ಞg ಬೇಳೆಕಾಳು ವಿತರಣೆ ಮಾಡಬೇಕು. ಕಮಲಾಪುರ ತಾಲೂಕಿನ ತಡಕಲ್ ಗ್ರಾಮದ ನಿವೇಶನಕ್ಕಾಗಿ ಹಣ ಮಂಜೂರು ಮಾಡಬೇಕು.

ಕಾಳಗಿ ತಾಲೂಕಿನ ಕಣಸೂರ್ ಗ್ರಾಮ ಪುನರ್ವಸತಿಗೊಳಿಸಬೇಕು ಎಂದು ಒತ್ತಾಯಿಸಿದರು ಧರಣಿ ಸತ್ಯಾಗ್ರಹದಲ್ಲಿ ಅಶೋಕ ಮ್ಯಾಗೇರಿ, ಶಾಂತಪ್ಪ ಪಾಟೀಲ, ಸುಧಾಮ ಧನ್ನಿ, ಸುನೀಲ ಮಾನಪಡೆ, ಕಾಶಿನಾಥ ಬಂಡಿ, ವೀರಭದ್ರಪ್ಪ ಕಲಬುರಗಿ,ವಿಶ್ವನಾಥ ರಾಗಿ, ಮುಂತಾದವರು ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

16 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

13 hours ago