ಗಣರಾಜ್ಯೋತ್ಸವದಂದು ಡಾ. ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಅಭಿನಂದನೆ

0
97

ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನದ ಪಿತಾಮಹ, ರತ್ನ ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸುತ್ತೋಲೆ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯುರಪ್ಪನವರ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಲಾಲ್ ಸಿಂಗ್ ಆರ್ಯ ಹಾಗೂ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣ್ ಸ್ವಾಮಿ ಮತ್ತು ಮಾಜಿ ಸಚಿವ ಹಾಗೂ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಎ ನಾರಾಯಣ್ ಸ್ವಾಮಿ ಯವರು ಸ್ವಾಗತಿಸಿ,ಅಭಿನಂದಿಸಿದ್ದಾರೆ.

ಜನೆವರಿ 26ನೇ ಗಣರಾಜ್ಯೋತ್ಸವ ಸಮಾರಂಭದಂದು, ರಾಜ್ಯದ ಸರ್ಕಾರಿ ಕಛೇರಿ, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ; ಸಂವಿಧಾನದ ಪಿತಾಮಹ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸುತ್ತೋಲೆ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳ ಕರ್ಮವನ್ನು ಸ್ವಾಗತಿಸಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಂಬಾರಾಯ ಅಷ್ಠಗಿ ಯವರು, ಡಾ ಬಿ ಆರ್ ಅಂಬೇಡ್ಕರ್ ರವರ ಬಗ್ಗೆ ಅಪಾರ ಗೌರವ ಹೊಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯುರಪ್ಪನವರ ಇಂತಹ ಮಹತ್ವದ ಸುತ್ತೋಲೆ ಹೊರಡಿಸಿರುವ ಕ್ರಮವನ್ನು ಶ್ಲಾಘಸಿ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿದರು.

ಈ ಸಮಯದಲ್ಲಿ ಬಿಜೆಪಿ ಎಸ್ ಸಿ ಮೋರ್ಚಾದ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here