ಕಲಬುರಗಿ: ಜನಪದ ಹಾಡುಗಳನ್ನು ಮುಂದಿನ ಪೀಳಿಗೆಯ ಯುವಜನರು ಅನುಭವಿಸಿ ಕೇಳಬೇಕು ಎನ್ನುವುದೇ ನನ್ನ ಆಶಯ ಎಂದು ಖ್ಯಾತ ರಂಗಭೂಮಿ ಕಲಾವಿದ ಹಾಗೂ ಚಿತ್ರನಟ, ಹಿನ್ನೆಲೆ ಗಾಯಕರಾದ ಗುರುರಾಜ ಹೊಸಕೋಟೆ ಅವರು ಅಭಿಪ್ರಾಯಪಟ್ಟರು.
ಶುಕ್ರವಾರ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ವತಿಯಿಂದ ಏರ್ಪಡಿಸಲಾದ ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ ಮಟ್ಟದ ಪ್ರಥಮ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜನಪದ ದಿನ ಮಾತನಾಡುವ, ವ್ಯವಹರಿಸುವ ಭಾμÉಯಾದರಿಂದ ಸುಲಭವಾಗಿ ಜನರಿಗೆ ತಲುಪುತ್ತದೆ. ಆದರೆ ಪಾಶ್ಚಾತ್ಯ ಸಂಗೀತದ ಅಬ್ಬರ, ಗಿಳಿನ ಮಧ್ಯೆ ಕಳೆದು ಹೋಗಿರುವ ಜನಪದ ಸಾಹಿತ್ಯ ಉಳಿಸಿಕೊಂಡು, ಬೆಳಸಿಕೊಂಡು ಹೋಗಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.
ಇಂದಿನ ಯುವಕರು ಯಾರ ಮಾತನ್ನೂ ಕೇಳುವುದಿಲ್ಲ. ಕೆಟ್ಟದ್ದು ಯಾವುದು ಒಳ್ಳೆಯದ ಯಾವುದು ಎಂಬ ಅರಿವು ಅವರಿಗಿರುವುದಿಲ್ಲ. ನಾವು ಸ್ವಲ್ಪ ಗಮನ ಬೇರೆ ಕಡೆಗೆ ಗಮನ ಹರಿಸಿದರೆ ಮಕ್ಕಳು ದಾರಿ ತಪ್ಪುವ ಸೂಕ್ಷ್ಮ ದಿನಗಳಿವು, ಮೊಬೈಲ್ ಬಂದು ಯುವಕರನ್ನು ಹಾಳು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪೆÇ್ರ. ಚಂದ್ರಕಾಂತ ಎಂ. ಯಾತನೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ನೆಲದ ಸಂಸ್ಕøತಿಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯಕ್ರಮ ಇದಾಗಿದೆ. ಜನಪದ ಹಾಡುಗಳು ದೈನಂದಿನ ಬದುಕಿನ ಪಾಠ ಕಲಿಸುತ್ತವೆ. ಅರ್ಥಗರ್ಭಿತ, ಮೌಲ್ಯಯುತ ಸಂದೇಶಗಳನ್ನು ಯುವಕರಿಗೆ ನೀಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ ಕರ್ನಾಟಕ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಜೋಗಿ ಅವರು ಮಾತನಾಡಿ, ಯಾವ ದೇಶದಲ್ಲಿ ತ್ಯಾಗ ಬಲಿದಾನ ಇರುತ್ತದೆಯೋ ಆ ದೇಶದಲ್ಲಿ ತೊಂದರೆಗಳು ಇರುವುದಿಲ್ಲ. ತ್ಯಾಗಕ್ಕೆ ಪ್ರತೀಕವಾದ ಸೇನೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್) ಇದಕ್ಕೆ ನಿದರ್ಶನ ಎಂದರು.
ಕಾರ್ಯಕ್ರಮದ ಉದ್ಘಾಟನೆಯ ಮೊದಲು ಜ್ಞಾನಗಂಗಾ ಆವರಣದ ಒಳಾಂಗಣ ಕ್ರೀಡಾಂಗಣದಿಂದ ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದವರೆಗೆ ಡೊಳ್ಳು ಕುಣಿತ, ಹಲಿಗೆ ವಾದನ ಹಾಗೂ ವೇಷಭೂಷಣಗಳೊಂದಿಗೆ ಮೆರವಣಿಗೆ ನಡೆಯಿತು.
ಜನಪದ ಗೀತೆಗಳ ಮೂಲಕ ರಂಜನೆ: ಕಾರ್ಯಕ್ರಮ ಉದ್ಘಾಟನೆ ನಂತರ ನೆರೆದಿದ್ದವರನ್ನು “ದುಡ್ಡು ಕೊಟ್ಟರೆ ಬೇಕಾದು ಸಿಗುತೈತಿ, ಶ್ರೀಕ್ಷೇತ್ರ ಮಾಡಕ್ ಹೊಂಟಾರರೀ ಹಾಗೂ ಮಗಾ ಹುಟ್ಯಾನ್ಯವ್ವ” ಎಂಬ ಜನಪದ ಗೀತೆಗಳನ್ನು ಹಾಡಿ ಕೇಳುಗರ ಮನರಂಜಿಸಿದರು.
ಈ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವ ಪೆÇ್ರ. ಸಂಜೀವಕುಮಾರ ಕೆ.ಎಂ. ಸಿಂಡಿಕೇಟ್ ಸದಸ್ಯೆ ಪಲ್ಲವಿ ಪಾಟೀಲ, ವಿವಿಧ ವಿಭಾಗದ ಡೀನ್‍ಗಳು, ಉಪನ್ಯಾಸಕರು, ರಾಜ್ಯದ ಸುಮಾರು 20 ಕ್ಕಿಂತ ಹೆಚ್ಚಿನ ವಿಶ್ವವಿದ್ಯಾಲಯಗಳ ಎನ್.ಎಸ್.ಎಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗುಲಬರ್ಗಾ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಪೆÇ್ರ. ರಮೇಶ ಲಂಡನಕರ್ ಸ್ವಾಗತಿಸಿದರು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ವಿದ್ಯಾರ್ಥಿಗಳು ಎನ್.ಎಸ್.ಎಸ್. ಗೀತೆ ಸೊಗಸಾಗಿ ಹಾಡಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ.ಎಂ.ಬಿ. ಕಟ್ಟಿ ನಿರೂಪಿಸಿದರು. ಬಿ. ಬಿ. ಸರಡಗಿ ವಂದಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…