ಕಲಬುರಗಿ: ಕಳೆದ ವರ್ಷದ ದಾಸ್ತಾನು ಇರುವ ತೊಗರಿ ಏಕಾಏಕಿ ಮಾರುಕಟ್ಟೆಯಲ್ಲಿ ಕಡಿಮೆ ದರದಲ್ಲಿ ಮಾರಲು ಹೊರಟಿರುವ ಕುತಂತ್ರ ಬುದ್ಧಿಯ ನಫೆಡ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಸರಕಾರವನ್ನು ಆಗ್ರಹಿಸಿದ್ದಾರೆ.
ನಫೆಡ ಅಧಿಕಾರಿಗಳು ಕಳೆದ ವರ್ಷದ ದಾಸ್ತಾನು ಇರುವ ನೂರಾರು ಕ್ವಿಂಟಾಲ್ ತೊಗರಿಯನ್ನು ಕಡಿಮೆ ಬೆಲೆಯಲ್ಲಿ ದಾಲಮಿಲ್ ಗಳಿಗೆ ಮಾರುತ್ತಿದ್ದಾರೆ.ಈಗಾಗಲೇ ರಾಶಿ ಮಾಡಿರುವ ರೈತರ ಹೊಸ ತೊಗರಿಯನ್ನು ಕಾರ್ಖಾನೆ ಮಾಲೀಕರು ಕಡಿಮೆ ಬೆಲೆಗೆ ಕೊಳ್ಳುತ್ತಿದ್ದಾರೆ.
ಇದರಿಂದ ತೊಗರಿ ಬೆಲೆ ಧಿಡೀರನೆ ಕುಸಿದಿದೆ.ಅತಿವೃಷ್ಟಿಯಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆಯುವ ಸಾಹಸ ಮಾಡುತ್ತಿದ್ದಾರೆ.ಕಳೆದ ಬಾರಿ ರಾಶಿ ಆಗಿರುವ ತೊಗರಿ ಇಷ್ಟು ದಿನ ದಾಸ್ತಾನು ಮಾಡಿಟ್ಟುಕೊಳ್ಳುವ ಉದ್ದೇಶ ಏನು?ರೈತರ ತೊಗರಿ ಮಾರುಕಟ್ಟೆಗೆ ಬರುವ ಸಂದರ್ಭದಲ್ಲಿ ಹಳೆ ತೊಗರಿ ಮಾರಾಟಕ್ಕೆ ತಂದಿರುವ ಅಧಿಕಾರಿಗಳ ಮತ್ತು ದಳ್ಳಾಳಿಗಳ ಹಾಗೂ ಖರೀದಿಸುತ್ತಿರುವ ದಾಲಮಿಲ್ ಮಾಲಿಕರ ಒಳಒಪ್ಪಂದ ಆಗಿದೆ.
ಕಳೆದ ಬಾರಿ ರೈತರಿಂದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ 6100 ರೂ ನೀಡಿ ಖರೀದಿಸಿ ಈಗ 5200 ರೂಪಾಯಿಗೆ ಮಾರಾಟ ಮಾಡುತ್ತಿರುವುದರಿಂದ ಸರ್ಕಾರಕ್ಕೂ ನಷ್ಟ ಉಂಟಾಗುತ್ತಿದೆ.ರೈತರನ್ನು ಆರ್ಥಿಕವಾಗಿ ಕುಗ್ಗಿಸುವ ಹುನ್ನಾರ ನಡೆಯುತ್ತಿದೆ.ತೊಗರಿ ಬೆಳೆ ಭಾರಿ ಮಳೆಯಿಂದಾಗಿ ಇಳುವರಿ ಕಡಿಮೆ ಬರುತ್ತಿದೆ.ಬೆಳೆದಷ್ಟು ಬೆಳೆಗೆ ಒಳ್ಳೆ ಬೆಲೆ ನೀರಿಕ್ಷಿಸಿರುವ ಈ ಭಾಗದ ರೈತರಿಗೆ ಅಧಿಕಾರಿಗಳು ಈ ರೀತಿ ಮೋಸ ಮಾಡಲು ಹೊರಟಿರುವುದು ಅನ್ಯಾಯ.ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರ ದಾಸ್ತಾನು ಮಾಡಿರುವ ತೊಗರಿ ಮಾರಾಟವನ್ನು ತಡೆದು ತಪ್ಪಿತಸ್ಥ ನಫೆಡ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು.ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದುಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…