ಬಿಸಿ ಬಿಸಿ ಸುದ್ದಿ

ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯಿಂದ ಶಿಕ್ಷಕರಿಗೆ ‘ಗುರು ಸಾವಿತ್ರಿ’ ಪ್ರಶಸ್ತಿ ಪ್ರದಾನ

ಕಲಬುರಗಿ: ಮಹಿಳಾ ಸ್ವಾಭಿಮಾನದ ಸಂಕೇತದಂತಿದ್ದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರು ಶೋಷಣೆಗೊಳಗಾಗಿದ್ದ ಕೆಳ ಸಮುದಾಯದವರಿಗೆ ಶಿಕ್ಷಣ ನೀಡಿದರು. ಆ ಮೂಲಕ ಶೈಕ್ಷಣಿಕ ಕ್ರಾಂತಿಗೆ ಕಾರಣರಾದರು. ಅವರ ತತ್ವಾದರ್ಶಗಳನ್ನು ಇಂದಿನ ಶಿಕ್ಷಕರು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿ ಪ್ರಯುಕ್ತ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಸರಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪ್ರಾಂಗಣದಲ್ಲಿ ಶನಿವಾರ ಏರ್ಪಡಿಸಿದ ‘ಗುರು ಸಾವಿತ್ರಿ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿದ್ದ ಅಸಮಾನತೆಯನ್ನು ಹೊಡೆದೋಡಿಸಲು ಫುಲೆ ದಂಪತಿ ಶ್ರಮಿಸಿದ್ದರು. ಹಲವು ಅಡೆತಡೆಗಳನ್ನು ಎದುರಿಸಿ ಮಹಿಳೆಯರಿಗೆ ಶಿಕ್ಷಣ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದರ್ಶಪ್ರಾಯವಾದರು ಎಂದು ಮಾರ್ಮಿಕವಾಗಿ ಹೇಳಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಅಕ್ಚರದವ್ವ ಸಾವಿತ್ರಿಬಾಯಿ ಫುಲೆ ಅವರು ಅಂದಿನ ಕಾಲದ ಅನೇಕ ಮಹಿಳೆಯರನ್ನು ದಾಸ್ಯದ ಸಂಕೋಲೆಯಿಂದ ಬಿಡಿಸಿ ಸ್ತ್ರೀ ಸ್ವಾತಂತ್ರ್ಯದ ಕಹಳೆ ಊದಿದವರು. ಮಹಿಳೆ ನಾಲ್ಕು ಗೋಡೆಗಳಿಂದ ಹೊರ ಬಂದು ವಿದ್ಯೆ ಕಲಿಯುವುದು ಅಪರಾಧವಲ್ಲ ಎನ್ನುವುದನ್ನು ಗಟ್ಟಿ ದನಿಯಲ್ಲಿ ತಿಳಿಸಿದವರು. ಅವರು ನಡೆದ ಪ್ರತಿ ಹೆಜ್ಜೆಯೂ ಕಲ್ಲು ಮುಳ್ಳಿನ ಹಾದಿ ಅದೊಂದು ಮಹಾನ್ ಚರಿತ್ರೆಯಾಗಿದೆ. ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಆ ಮಹಾನ್ ವ್ಯಕ್ತಿಗಳಿಗೆ ಗೌರವ ಕೊಟ್ಟಂತಾಗುತ್ತದೆ ಎಂದರು.

ಆದರ್ಶ ಶಿಕ್ಷಕ ಸಿದ್ಧಲಿಂಗ ಬಾಳಿ ಮಾತನಾಡಿ, ಶಿಕ್ಷಣವೆಂದರೆ ತಿಳಿಯದ, ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು, ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ. ಹಾಗಾಗಿ, ಭಾರತದ ಶಿಕ್ಷಣ ವ್ಯವಸ್ಥೆಗೆ ಫುಲೆ ದಂಪತಿಗಳ ಕೊಡುಗೆ ಅಪಾರವಾದುದು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಜಿಲ್ಲೆಯ ಆದರ್ಶ ಶಿಕ್ಷಕರಿಗೆ ‘ಗುರು ಸಾವಿತ್ರಿ’ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಪ್ರಿನ್ಸಿಪಾಲ್ ಬಸಂತಬಾಯಿ ಡಿ.ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ವೀರಶೈವ ಲಿಂಗಾಯತ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೀಂದ್ರಪ್ಪ ಗಣಮುಖಿ, ಅಕಾಡೆಮಿಯ ಮಾತಿ ರೇಷ್ಮಿ, ಎಸ್.ಎಂ.ಪಟ್ಟಣಕರ್, ಶಕುಂತಲಾ ಪಾಟೀಲ ಜಾವಳಿ, ಎಂ.ಬಿ.ನಿಂಗಪ್ಪ, ರೇಣುಕಾ ಡಾಂಗೆ, ಪ್ರಭುಲಿಂಗ ಮೂಲಗೆ, ಶರಣಬಸವ ಜಂಗಿನಮಠ, ವಿದ್ಯಾಸಾಗರ ದೇಶಮುಖ, ಮಂಜುಳಾ ಪಾಟೀಲ, ಪೂಜಾ ಆಲಗೂಡ, ಬಿ.ಎಂ.ಪಾಟೀಲ ಕಲ್ಲೂರ. ಜಗದೀಶ ಮರಪಳ್ಳಿ, ಸುನೀಲ ಹಡಪದ, ಅಶೋಕ ಘೂಳಿ, ಮಂಗಲಾ ಕಪರೆ, ಬಿ.ಎಂ.ಪಾಟೀಲ ಕಲ್ಲೂರ, ಕಲ್ಯಾಣಕುಮಾರ ಶೀಲವಂತ, ಹೆಚ್.ಎಸ್.ಬರಗಾಲಿ, ವಿಶ್ವನಾಥ ತೊಟ್ನಳ್ಳಿ, ಶರಣಬಸಪ್ಪ ನರೋಣಿ, ಶಿವಾನಂದ ಮಠಪತಿ, ಶಿವರಾಜ ಕಾಳಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಶಿಕ್ಷಕರಿಗೆ ‘ಗುರು ಸಾವಿತ್ರಿ’ ಪ್ರಶಸ್ತಿ ಪ್ರದಾನ: ವೃತ್ತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆದರ್ಶ ಶಿಕ್ಷಕರಾದ ಗಂಗಮ್ಮ ನಾಲವಾರ, ಮಂಜುಳಾ ಠಾಕೂರ್, ಪ್ರಶಾಂತ ಕಂಬಾರ, ಧನರಾಜ್ ಮಠಪತಿ, ಶ್ರೀಪಾಲ್ ಭೋಗಾರ, ಅಮೃತ ದೊಡ್ಮನಿ, ಅನಿತಾ ಪರಮೇಶ್ವರ, ಡಿ.ಎನ್.ಪಾಟೀಲ, ಎಸ್.ಎಂ.ಡೋಮನಾಳ, ಮಲ್ಲಮ್ಮ ಕಾಳಗಿ ಅವರಿಗೆ ‘ಗುರು ಸಾವಿತ್ರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಿರ್ಗತಿಕರು, ಮಹಿಳೆಯರು ಮತ್ಗತು ಮಕ್ಕಳಿಗೆ ಶಿಕ್ಷಣ ನೀಡುವುದಕ್ಕಾಗಿ ನಾನಾ ರೀತಿಯ ಮಾನಪಮಾನಗಳನ್ನು ಸಹಿಸಿ, ನಿಸ್ವಾರ್ಥ ಭಾವನೆಯಿಂದ, ಸಮರ್ಪಣಾಭಾವದಿಂದ ದುಡಿದ ತಾಯಿ ಸಾವಿತ್ರಿಬಾಯಿ ಫುಲೆ ಅವರು ದೇಶ ಕಂಡ ಅಪರೂಪದ ಶಿಕ್ಷಕಿಯಾಗಿದ್ದಾಳೆ. ಇಂಥ ತ್ಯಾಗಮಯಿಯ ಜೀವನ ಇಂದಿನ ಶಿಕ್ಷಕರಿಗೆ ಮಾದರಿಯಾಗಿದೆ. – ಸುವರ್ಣಾ ಹೆಚ್.ಮಲಾಜಿ,ಅಧ್ಯಕ್ಷರು, ಜಿಪಂ., ಕಲಬುರಗಿ

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

50 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago