ಕಲಬುರಗಿ: ಯೋಗ, ಧಾನ, ಪ್ರಾಣಾಯಾಮಗಳನ್ನು ದಿನನಿತ್ಯ ಅರ್ಧಗಂಟೆಯಾದರೂ ಮಾಡುವುದರಿಂದ ಸದೃಢಆರೋಗ್ಯ ಪೂರ್ಣಜೀವನ ನಡೆಸಬಹುದೆಂದು ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರಾಮಚಂದ್ರರಾವ್ ಅವರು ತಿಳಿಸಿದರು.
ಭಾರತ್ ಸರ್ಕಾರ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಕಲಬುರ್ಗಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಹಾಗೂ ಪ್ರೌಢ ಶಾಲೆ ಭೀಮರಾಯನಗುಡಿ, ತಾಲ್ಲೂಕು ಪಂಚಾಯಿತಿ ಶಹಾಪೂರ್ ಸಂಯುಕ್ತ ಆಶ್ರಯದಲ್ಲಿ ಭೀಮರಾಯನಗುಡಿಯಲ್ಲಿ ಹಮ್ಮಿಕೊಂಡ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯೋಗವನ್ನು ಪ್ರತಿಯೊಬ್ಬರು ಅಭ್ಯಾಸ ಮಾಡಿ ಸ್ವಸ್ಥಶರೀರ ಮತ್ತು ಆರೋಗ್ಯಪೂರ್ಣ ಮನಸ್ಸು ಹೊಂದಲು ಸಾಧ್ಯವಾಗುತ್ತಿದೆ ಎಂದರು.
ಯೋಗ ಶಿಕ್ಷಕ ಲಿಂಗಯ್ಯಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾರತ ದೇಶವು ವಿಶ್ವಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ಅವುಗಳಲ್ಲಿ ಯೋಗ ವಿದ್ಯೆಯೂ ಒಂದಾಗಿದೆ. ಇದು ನಮಗೆ ಅತ್ಯಂತ ಪ್ರಾಚೀನವಾದದ್ದು. ಋಷಿ ಮುನಿಗಳು ಈ ಸಾಧನ ಮಾರ್ಗವನ್ನು ಜನರಿಗೆ ತಿಳಿಸಿಕೊಟ್ಟಿದ್ದಾರೆ ಎಂದರು.
ಪ್ರತಿಯೊಬ್ಬ ವ್ಯಕ್ತಿಯು ಈಗ ತನ್ನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದನ್ನು ನಾವು ನೋಡುತ್ತಿದ್ದೇವೆ. ಯೋಗಾಸನ, ಪ್ರಾಣಾಯಾಮ ಮಾಡುವುದರಿಂದ ಸದೃಢವಾದ ಶರೀರ, ಆರೋಗ್ಯಯುಕ್ತ ಮನಸ್ಸುದನ್ನು ಪ್ರತಿಯೊಬ್ಬರು ಬಯಸುತ್ತಾರೆ. ಅವರು ದಿನ ನಿತ್ಯಯೋಗ ಮಾಡಿ ತಮ್ಮ ಜೀವನ ಮಟ್ಟವನ್ನು ಸುಧಾರಣೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.
ಪ್ರಾತ್ಯಕ್ಷತೆ ಯೋಗ ಮಾಡಿ ತೋರಿಸಿದ ಅವರು, ಯೋಗದ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿ ಯೋಗದಿಂದಾಗುವ ಲಾಭಗಳನ್ನು ತಿಳಿಸಿದರು ಮತ್ತು ಸರಳವಾದ ಆಸನಗಳು ದಿನ ನಿತ್ಯ ಮಾಡುವಂತೆ ವಿದ್ಯಾರ್ಥಿಗಳಿಗೆ ಮಾಡಿ ತೋರಿಸಿದರು.
ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಉಪ ಪ್ರಿನ್ಸಿಪಾಲ್ ಗುರುಬಸಪ್ಪ ಬೂನಾಳ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಸಹಾಯಕ ನಾಗಪ್ಪ ಅಂಬಾಗೋಳ್ ಅವರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿ, ಕೂನೆಯಲ್ಲಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…