ಕಲಬುರಗಿ: ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಆಡಳಿತ ದುರುಪಯೋಗ ಹಾಗೂ ಮಾಮವಾರ್ಗದ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಟ್ವಿಟ್ ಮಾಡಿ ಆರೋಪಿಸಿದ್ದಾರೆ.
ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರ ಟ್ವಿಟ್ ಗೆ ರೀ ಟ್ವಿಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು ರಾಜ್ಯಗಳಲ್ಲಿ ಸರಕಾರ ರಚಿಸುವುದಾಗಲೀ ಅಥವಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲೀ, ಬಿಜೆಪಿ ಆಡಳಿತ ದುರಪಯೋಗಪಡಿಸಿಕೊಂಡು, ಹಣದ ಆಮಿಷವೊಡ್ಡಿ ವಿರೋಧ ಪಕ್ಷದವರನ್ನು ಬೆದರಿಸುತ್ತಾರೆ ಎಂದು ಕೀಡಿಕಾರಿದ್ದಾರೆ
ಬಹುಶಃ ಅವರು ಅಧಿಕಾರಕ್ಕೆ ಬರಲು ಇದೊಂದೆ ಮಾರ್ಗವಿದೆಯಂದು ತೋರುತ್ತದೆ ಎಂದಿದ್ದಾರೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಮುನ್ನ ಟ್ವಿಟ್ ಮಾಡಿದ್ದ ದರ್ಶನಾಪುರ ಅವರು ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈ ಆಟ ಬಹಳ ದಿನ ನಡೆಯುವುದಿಲ್ಲ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಆಯ್ಕೆಯಾದ ನಿರ್ದೇಶಕರನ್ನು ಕಾನೂನುಬಾಹಿರವಾಗಿ ಅನರ್ಹಗೊಳಿಸಿ ಗದ್ದುಗೆ ಹಿಡಿದ ಕ್ರಮ ನಿಜಕ್ಕೂ ತತ್ವ ಸಿದ್ದಾಂತರಹಿತ ರಾಜಕಾರಣಕ್ಕೊಂದು ಉದಾಹರಣೆ. ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಟ್ವಿಟ್ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…