ಬಿಸಿ ಬಿಸಿ ಸುದ್ದಿ

ಡಿಸಿಸಿ ಬ್ಯಾಂಕ್ ಅಧಿಕಾರಕ್ಕಾಗಿ ಬಿಜೆಪಿ ಬ್ಯಾಕ್ ಡೋರ್ ಎಂಟ್ರಿ: ಅಜಯ್ ಸಿಂಗ್ ಆಕ್ರೋಶ

ಬೆಂಗಳೂರು/ ಕಲಬುರಗಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕೆಲ ಗಂಟೆ ಮುಂಚಿತವಾಗಿ ಚುನಾಯಿತ ಮೂವರು ನಿರ್ದೇಶಕರನ್ನು ಚಿಲ್ಲರೆ ಕಾರಣ ಮುಂದೆ ಮಾಡಿ ಅನರ್ಹಗೊಳಿಸುವ ಮೂಲಕ ಬಿಜೆಪಿಯವರು ಹಿಂಬಾಗಿಲಿನಿಂದ,  ವಾಮಮಾರ್ಗದಿಂದ ಅಧಿಕಾರ ಗದ್ದುಗೆಗೆ ಏರಿದ್ದಾರೆ ಎಂದು ಕಾಂಗ್ರೆಸ್ ಜೇವರ್ಗಿ ಶಾಸಕರು ಹಾಗೂ ವಿಧಾನಸಬೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಮೇಲೆ ಹೇಗೆ ರಾಜ್ಯ ಸರಕಾರದಲ್ಲಿ ಬಿಜೆಪಿ ಹಿಂಬಾಗಿಲ ಎಂಟ್ರಿ ಪಡೆಯಿತೋ, ಥೇಟ್ ಅದೇ ರೀತಿ ಡಿಸಿಸಿ ಬ್ಯಾಂಕಿನಲ್ಲಿಯೂ ಹಿಂಬಾಗಿಲಿನ ಪ್ರವೇಶ ಪುನರಾವರ್ತನೆಯಾಗಿದೆ ಎಂದು ಗೇಲಿ ಮಾಡಿದ್ದಾರೆ.

ಇಂತಹ ಆಟ ಬಹಳ ದಿನ ನಡೆಯಲ್ಲ. ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಇಂತಹ ಕೆಟ್ಟ ರಾಜಕೀಯ ಕೆಲಸ ಯಾರೂ ಮಾಡಿಲ್ಲ.  ಇಂತಹ ಘಟನೆಗಳು ಎಂದೂ ನಡೆದಿಲ್ಲ.  ಬಿಜೆಪಿ ಶಾಸಕರನ್ನು ಬ್ಯಾಂಕಿಗೆ ಅಧ್ಯಕ್ಷರನ್ನಾಗಿಸಬೇಕು ಎಂಬ ಒಂದೇ ಕಾರಣದಿಂದ ಇಡೀ ಸರಕಾರಿ ಯಂತ್ರ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ದೂರಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆÉಯೇ ಇಲ್ಲ ಎಂಬುದಕ್ಕೆ ಡಿಸಿಸಿ ಬ್ಯಾಂಕಿನ ಈ ಚುನಾವಣೆಯೇ ಕನ್ನಡಿ. ರಾಜ್ಯದಲ್ಲಿ ಸರಕಾರ ರಚಿಸುವುದಾಗಲೀ ಅಥವಾ ಡಿಸಿಸಿ ಬ್ಯಾಂಕ್ ಅಧ್ಯP್ಷÀರಾಗಲಿ ನೇರ ಮಾರ್ಗದಲ್ಲಿ ಬಿಜೆಪಿಗೆ ಕೆಲಸವೇ ಆಗೋದಿಲ್ಲ. ಅದೇನಿದ್ದರೂ ಬ್ಯಾಕ್ ಡೋರ್  ಎಂಟ್ರಿನೇ ಮಾಡೋ ಅನಿವಾರ್ಯತೆ ಎದುರಾಗುತ್ತಿದೆ.

ಬಿಜಿಪಿ ಆಡಳಿತ ದುರಪಯೋಗಪಡಿಸಿಕೊಂಡು, ಆಮಿಷವೊಡ್ಡಿ ,ಬೆದರಿಸುತ್ತ ಅಧಿಕಾರಕ್ಕೆ ಬಂದಿದೆ. ಡಿಸಿಸಿ ಬ್ಯಾಂಕಿನಿಂದ ಇನ್ನು ಮುಂದೆ ರೈತರ ಹಿತ ಕಾಯುವ ಕೆಲಸಗಲು ಅದ್ಹೇಗೆ ಸಾಧ್ಯ? ಜನರು, ರೈತರು  ಎಲ್ಲವನ್ನು ಗಮನಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಡಾ. ಜಯ್ ಸಿಂಗ್ ಹೇಳಿಕೆಯಲ್ಲಿ ಕಿಡಿ ಕಾರಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago