ಕಲಬುರಗಿ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವ್ಶೆಜ್ಞಾನಿಕ ಮನೋಭಾವನೆಯನ್ನು ಮೂಡಿಸಲು ಹಾಗೂ ವಿಜ್ಞಾನವನ್ನು ಜನಪ್ರಿಯಗೊಳಿಸಲು ಉದ್ದೇಶಿತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ(ಕರಾವಿಪ) ವಿಜ್ಞಾನ ಭವನ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನೆರವು ನೀಡುವುದಾಗಿ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ ಪಾಟೀಲ ರೇವೂರ ಘೋಷಿಸಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕರಾವಿಪ) ವತಿಯಿಂದ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಲಬುರಗಿ ನಗರದ ಎಸ್.ಜಿ.ಎನ್. ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಭಾನುವಾರ (ಸ್ಥಿರ ಜೀವನಕ್ಕಾಗಿ ವಿಜ್ಞಾನ ಎಂಬ ಕೇಂದ್ರ ವಿಷಯದಡಿ ಎರಡು ದಿನಗಳ ಕಾಲ ಸಮಾವೇಶದ ಜಿಲ್ಲಾ ಸಂಯೋಜಕರಿಗೆ ಏರ್ಪಡಿಸಿರುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ನಗರದಲ್ಲಿ ವಿಜ್ಞಾನ ಭವನ ನಿರ್ಮಾಣದಿಂದ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿ, ಶಿಕ್ಷಕ ಮತ್ತು ಜನಸಾಮಾನ್ಯರಿಗೆ ಹೆಚ್ಚು ಉಪಯೋಗವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಶೈಕ್ಷಣಿಕ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ತು ಸದಸ್ಯ ಶಶೀಲ ನಮೋಶಿ ಮಾತನಾಡಿ, ವಿಚಾರವಾದಿ ಎಚ್.ನರಸಿಂಹಯ್ಯ್ಯ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಆರಂಭಗೊಂಡ ರಾಜ್ಯ ವಿಜ್ಞಾನಪರಿಷತ್ತು ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಬೆಳೆಸುವುದು, ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ ನಿರ್ಮೂಲನೆಮೂಲಕವ್ಶೆಜ್ಞಾನಿಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಆರಂಭಿಸಿದ ಈ ವಿಜ್ಞಾನ ಸಂಸ್ಥೆಯು ಇಂದುದೇಶದಲಿವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
ಸಮಾವೇಶದ ಮಾರ್ಗದರ್ಶಿ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು, ಶಿಕ್ಷಕರು ವಿದ್ಯಾರ್ಥಿಗಳು ವಿಜ್ಞಾನದ ಆಸಕ್ತಿ ಬೆಳೆಸುವ ಮೂಲಕ ಅವರಲ್ಲಿ ವ್ಶೆಜ್ಞಾನಿಕ ಚಿಂತನೆ ಬೆಳೆಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ್ ಕಡ್ಲೇವಾಡ್ ಮಾತನಾಡಿ, ಈ ಸಮಾವೇಶವು ಮಕ್ಕಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಕಲ್ಪಿಸುತ್ತದೆ ಎಂದರು.
ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಜಂಟಿ ಕಾರ್ಯದರ್ಶಿ ಬಿ.ಎನ್.ಶ್ರೀನಾಥ್, ಸಮಿತಿ ಸದಸ್ಯ ಡಾ.ಕುಂಟೆಪ್ಪ ಗೌರಿಪುರ, ವಿಶ್ರಾಂತ ಪ್ರಾಧ್ಯಾಪಕ ಡಾ.ವಿ.ಎನ್.ನಾಯಕ್, ಟಿ.ಜಿ.ಪ್ರೇಮ ಕುಮಾರ್ ಕಾಲೇಜಿನ ಪ್ರಾಚಾರ್ಯ ಶಿವರಾಜ್ ಶೀಲವಂತ, ಡಾ.ರಾಜಾ ಸಮರಸೇನ ಮೋದಿ, ಗುರುಸ್ವಾಮಿ ಹಿರೇಮಠ್, ರಾಜಶೇಖರ್ ಗೌಡ,ಮಹೇಶ್ ದೇವಣಿ, ಶಿವರಾಜ್ ಪಾಟೀಲ್ ಇತರರುಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…