ಕಲಬುರಗಿ: ಜನತಾ ಬಜಾರದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆ ಬಿಜೆಪಿ ಸರಕಾರ ಕುಂಟುನೇಪ ನೀಡಿ ಮುಂದುಡಿರುವುದು ಜನವಿರೋಧಿ, ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜನತಾ ಬಜಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಶ್ಚಳ ಬಹುಮತವಿದ್ದು ಬಿಜೆಪಿಗೆ ಅಧಿಕಾರ ತಪ್ಪುತ್ತದೆ ಎಂಬ ಉದ್ದೇಶದಿಂದ ಚುನಾವಣೆಯನ್ನು ಮುಂದುಡಿರುತ್ತಾರೆ ಆದರೆ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಆಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಕಲಬುರಗಿ-ಯಾದಿಗರಿ ಡಿಸಿಸಿ ಬ್ಯಾಂಕ್ ಚುನಾವಣೆ ನಡಿಸಿದಂತೆ ವಾಮ ಮಾರ್ಗದ ಮೂಲಕ ಕಾನೂನು ಗಾಳಿಗೆ ತೂರಿ ಅಧಿಕಾರ ದುರುಪಯೋಗಪಡಿಸಿಕೊಂಡು ಡಿಸಿಸಿ ಬ್ಯಾಂಕಿನಲ್ಲಿ ಅಧಿಕಾರಕ್ಕೆ ಬಂದಿರುವ ಹಾಗೆ ಜನತಾ ಬಜಾರದಲ್ಲಿಯೂ ಕೂಡಾ ಅಧಿಕಾರ ದುರುಪಯೋಗ ನಡೆಸಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಚುನಾವಣೆ ಮುಂದುಡಿದ್ದು ಕಂಡುಬರುತ್ತದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಯವರು ಜಿಲ್ಲೆಯ ಅಭಿವೃದ್ಧಿ ಕಡೆ ಕಿಂಚಿತ್ತೂ ಕಾಳಜಿ ವಹಿಸದೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ ಜನರ ತಿರ್ಪಿನ ವಿರುದ್ದ ನಡೆದುಕೊಂಡು ಕಾನೂನು ಗಾಳಿಗೆ ತೂರಿ ಅಧಿಕಾರ ದುರುಪಯೋಗಪಡಿಸಿಕೊಂಡು ವಾಮ ಮಾರ್ಗದ ಮೂಲಕ ಅಧಿಕಾರ ಪಡೆದುಕೊಳ್ಳುತ್ತಿರುವ ನೀತಿಯನ್ನು ನೋಡಿದರೆ ಬಿಜೆಪಿ ಸರಕಾರ ಅಧಿಕಾರದ ಆಸೆಗಾಗಿ ಯಾವ ಕೀಳು ಮಟ್ಟಕ್ಕಾದರೂ ಇಳಿಯುತ್ತಿದ್ದಾರೆಂದು ಕೀಡಿಕಾರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…