ವಾಡಿ: ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾದರೂ ದೇಶದ ಅಸಂಖ್ಯಾತ ಮಹಿಳೆಯರಿಗೆ ಶೋಷಣೆಯ ಸಂಕೋಲೆಯಿಂದ ಇನ್ನೂ ಮುಕ್ತಿ ಸಿಕ್ಕಿಲ್ಲ. ಶಿಕ್ಷಣ ಪಡೆದ ಮಹಿಳೆಯರೂ ಕೂಡ ಪುರುಷ ಪ್ರಧಾನ ವ್ಯವಸ್ಥೆಯ ವಿರುದ್ಧ ದನಿ ಎತ್ತಲು ಸಾಧ್ಯವಾಗುತ್ತಿಲ್ಲ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಸದಸ್ಯೆ ಪದ್ಮರೇಖಾ ವಿ.ಕೆ ಆಕ್ರೋಶ ವ್ಯಕ್ತಪಡಿಸಿದರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಪಟ್ಟಣದ ಎಸ್‌ಯುಸಿಐ (ಸಿ) ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಮನೆಯ ನಾಲ್ಕು ಗೋಡೆಗಳ ಮಧ್ಯೆ ನರಕದ ಬದುಕು ಸವೆಸುತ್ತಿದ್ದ ೧೮ನೇ ಶತಮಾನದ ಮಹಿಳೆಯರ ದುಸ್ಥಿತಿಗೆ ಮರುಗಿದ ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿಗಳು, ಮೇಲ್ವರ್ಗ ಕೀಳು ವರ್ಗ ಎಂಬ ಬೇಧ ತೋರದೆ ಅವರವರ ಬಡಾವಣೆಗಳಿಗೆ ಹೋಗಿ ಅಕ್ಷರ ಕಲಿಸುತ್ತಿದ್ದರು. ಮಹಿಳೆಯರಿಗಾಗಿ ವಿಶೇಷ ಬಯಲು ಪಾಠ ಶಾಲೆಗಳನ್ನು ತೆರೆದ ಈ ಮಹಾನ್ ವ್ಯಕ್ತಿಗಳು ಸ್ತ್ರೀ ಜಾಗೃತಿಗಾಗಿ ಅನುಭವಿಸಿದ ಅವಮಾನ ಅಷ್ಟಿಷ್ಟಲ್ಲ. ಅಂತಹ ತ್ಯಾಗಮಯಿ ಫುಲೆ ದಂಪತಿಗಳು ನಮಗೆ ಆದರ್ಶವಾಗಬೇಕು ಎಂದರು.
ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಮಾತನಾಡಿದ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಸಂಚಾಲಕ ವೀರಭದ್ರಪ್ಪ ಆರ್.ಕೆ, ಮಹಿಳೆಯ ಶೋಷಣೆಗೆ ಶತಶತಮಾನಗಳ ಇತಿಹಾಸವಿದೆ. ಪುರುಷರ ಕಾಲಾಳಾಗಿ ಮಹಿಳೆ ಕಾಲವನ್ನು ದೂಡುತ್ತಿದ್ದಾಳೆ. ಗಂಡು ಹೆಣ್ಣಿನ ಸಮಾನತೆಯ ಬಗ್ಗೆ ಭಾಷಣ ಮಾಡುವವರು ತಮ್ಮ ಮನೆಯ ಮಹಿಳೆಯರಿಗೆ ಯಾವ ಸ್ವಾತಂತ್ರ್ಯ ಕೊಡುತ್ತಿದ್ದಾರೆ ಎಂಬುದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಜಾತಿ ಅಸಮಾನತೆ ಒಂದೆಡೆಯಾದರೆ ಮಹಿಳೆಯರಲ್ಲಾ ವರ್ಗಗಳ ಪುರುಷರಿಂದ ತುಳಿತಕ್ಕೊಳಗಾಗಿದ್ದಾರೆ. ಅನ್ಯಾಯ, ಅಸಮಾನತೆ ಹಾಗೂ ಶೋಷಣೆಯನ್ನು ಕಾಪಾಡಿಕೊಂಡು ಹೋಗುತ್ತಿರುವ ಈ ಬಂಡವಾಳಶಾಹಿ ವ್ಯವಸ್ಥೆ ಮೊದಲು ತೊಲಗಬೇಕು. ಎಲ್ಲಾ ಜಾತಿ ಜನಾಂಗದ ಮಹಿಳೆಯರು ಸಂಘಟಿತರಾಗಿ ಹೋರಾಡಿದಾಗ ಮಾತ್ರ ಸಾವಿತ್ರಿಬಾಯಿ ಫುಲೆ ಅವರ ಕನಸು ನನಸಾಗುತ್ತದೆ ಎಂದರು.
ಶಿಕ್ಷಕಿ ಶ್ರೀದೇವಿ ಎಸ್.ಮಲಕಂಡಿ ಅಧ್ಯಕ್ಷತೆ ವಹಿಸಿದ್ದರು. ಸೀತಾ ಎಂ.ಹೇರೂರ, ಕೋಕಿಲಾ ಎಸ್.ಹೇರೂರ, ವೆಂಕಟೇಶ ದೇವದುರ್ಗಾ ಪಾಲ್ಗೊಂಡಿದ್ದರು. ಶಿವಲೀಲಾ ರಮೇಶ ಮಾಶಾಳ ನಿರೂಪಿಸಿ, ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…