ಸುರಪುರ: ತಾಲೂಕಿನ ಲಕ್ಷ್ಮೀಪುರದ ಶ್ರೀಗಿರಿ ಮಠದಲ್ಲಿ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರು ಯಾದಗಿರಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಬಸನಗೌಡ ಯಡಿಯಾಪೂರ ಅವರುನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ,ಅನೇಕ ವರ್ಷಗಳ ರಾಜಕೀಯ ಅನುಭವಿಗಳಾದ ಬಸನಗೌಡ ಯಡಿಯಾಪೂರವರು ಇಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿರುವುದು ಸಂತೋಷದ ವಿಷಯವಾಗಿದೆ,ತಮ್ಮಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದ ಎಲ್ಲಾ ಸಮಸ್ಯೆಗಳು ದೂರಗೊಳಿಸುವ ಕೆಲಸಗಳಾಗಲಿ ಎಂದು ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಬಸನಗೌಡ ಯಡಿಯಾಪೂರ ಮಾತನಾಡಿ,ಜಿಲ್ಲೆಯ ಎಲ್ಲಾ ಗ್ರಾಮಗಳ ಅಭಿವೃಧ್ಧಿಗೆ ಶ್ರಮಿಸುವೆನು,ಅದಕ್ಕೆ ತಮ್ಮಂತ ಸ್ವಾಮೀಜಿಗಳ ಹಾಗು ಗ್ರಾಮೀಣ ಜನರ ಸಹಕಾರವು ಮುಖ್ಯವಾಗಿದೆ.ಅಲ್ಲದೆ ನಮ್ಮ ಯಾದಗಿರಿ ಜಿಲ್ಲೆಯ ಅಭೀವೃಧ್ಧಿಗೆ ಸರಕಾರವೂ ಸ್ಪಂಧಿಸುತ್ತಿದ್ದು ಇನ್ನೂ ಹೆಚ್ಚಿನ ಅನುದಾನವನ್ನು ತಂದು ಜಿಲ್ಲೆಯ ಸರ್ವಾಂಗಿಣ ಅಭೀವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ್ ಅಗತೀರ್ಥ ಯುವ ಮುಖಂಡ ಮಲ್ಲಿಕಾರ್ಜುನರಡ್ಡಿ ಕೋಳಿಹಾಳ ದೇವಿಂದ್ರ ಕೋಳಿಹಾಳ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…