ಬಿಸಿ ಬಿಸಿ ಸುದ್ದಿ

ಕಲಬುರಗಿ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಚಟ್ನಳ್ಳಿ ನೇಮಕ

ಕಲಬುರಗಿ : ಜಿಲ್ಲಾ  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾಗಿ  ಬಸವರಾಜ ಚಟ್ನಳ್ಳಿ ಅವರನ್ನು ನೇಮಿಸಲಾಗಿದೆ.

ಕಳೆದ ತಿಂಗಳು ಡಿಸೆಂಬರ್ ೨೮-೨೯ ರಂದು ದೊಡ್ಡ ಬಳ್ಳಾಪುರದಲ್ಲಿ ನಡೆದ ಸಂಘದ ಉದ್ಘಾಟನೆಯ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತಿರಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನಾಗಮೋಹನದಾಸ ಹಾಗೂ ಇಸ್ರೋದ ವಿಶ್ರಾಂತ ಅಧ್ಯಕ್ಷ ಎ.ಎಸ್. ಕಿರಣಕುಮಾರ ಹಾಗೂ ಸಂಘಟನೆಯ ಅಧ್ಯಕ್ಷರಾದ ಹುಲಕಲ್ ನಟರಾಜ ಅವರು ನೇಮಕ ಮಾಡಿ ಆದೇಶ ನೀಡಲಾಗಿದೆ.

ಜನ ಮಾನಸದಲ್ಲಿ ದೇವರು ಹಾಗೂ ಧರ್ಮಗಳ ಹೆಸರಿನ ಮೇಲೆ ನಡೆದಿರುವ ಮೌಢ್ಯಗಳನ್ನು ಬಯಲು ಮಾಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ವೈಜ್ಞಾನಿಕ ಅರಿವು ಹಾಗೂ ಸಂಶೋಧನೆ ತೊಡಗುವುದೆ ಸಂಘಟನೆಯ ಗುರಿ ಎಂದು ತಿಳಿಸಲಾಗಿದೆ.

ಸಂವಿಧಾನ ಭಾರತದ ನಾಗರಿಕರಿಗೆ ನೀಡಿದ ೧೫/ಎ ಪರಿಚೇಧದ ಅನ್ವಯ ಜನರಲ್ಲಿ ವೈಜ್ಞಾನಿಕ‌ ಮನೋಭಾವ ಬಿತ್ತುವುದು, ಮೌಢ್ಯ ಮುಕ್ತ ಜೀವನ ನಡೆಸಲು ಸಹಕರಿಸುವುದೆ ಸಂಘದ ಮುಖ್ಯ ಗುರಿಯಾಗಿದೆ ಎಂದು ಕಲಬುರ್ಗಿ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಕಾಳಜಿ ಇರುವ, ವೈಜ್ಞಾನಿಕ – ವೈಚಾರಿಕ ನಿಲುವು ಉಳ್ಳ ಆಸಕ್ತರು ಯಾರಾದರೂ ಸಂಘಕ್ಕೆ 250/ರೂ ಶುಲ್ಕ ಕಟ್ಟುವ ಮೂಲಕ ಸದಸ್ಯರಾಗಬಹುದು ಎಂದವರು ತಿಳಿಸಿದರು.  ಆಸಕ್ತರು : +91 99868 49011 ಸಂಪರ್ಕಿಸಬೇಕೆಂದು ಕೋರಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

6 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

24 hours ago