ಕಲಬುರಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ ಮೂವರ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ರಾವೂರ ಬಳಿ ಇಂದು ನಡೆದಿದೆ.
ರಾವೂರ ಗ್ರಾಮದ ನಿವಾಸಿ ಭೀಮಾಶಂಕರ ಸುಭಾಷ್ ಪ್ಯಾಟಿ (28), ಅಕ್ಬರ್ ಪಟೇಲ್ (26) ಹಾಗೂ 20 ವರ್ಷದೊಳಗಿನ ಯುವತಿ ಸಹ ಘಟನೆಯಲ್ಲಿ ಮೃತಪಟ್ಟಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ. ಮೃತ ಯುವಕರಿಬ್ಬರು ಲಾರಿ ಚಾಲಕರಾಗಿ ವೃತಿಯಲ್ಲಿ ತೊಡಗಿದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.