ಕಲಬುರಗಿ: ಈ ಹಿಂದೆ ತೊಗರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಈ ವರ್ಷ ರದ್ದು ಮಾಡಿದ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.
ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ತೊಗರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವಾಗಲೇ ರಾಜ್ಯ ಸರಕಾರ ಪ್ರೋತ್ಸಾಹ ಧನ ನೀಡದೆ ಅನ್ನದಾತರಿಗೆ ಅನ್ಯಾಯವೆಸಗಿದೆ. ಸಿಎಂ ಬಿಎಸ್ ಯಡಿಯೂರಪ್ಪನವರು ಬೀದರ್ ಗೆ ಭೇಟಿ ನೀಡಿದ್ದಾಗ ಪ್ರತಿ ರೈತರಿಂದ 20 ಕ್ವಿಂಟಾಲ್ ತೊಗರಿ ಖರೀದಿಸುವ ಭರವಸೆ ನೀಡಿದ್ದರು.
ಅವರ ಭರವಸೆ ಕೇವಲ ವೇದಿಕೆಗೆ ಸೀಮಿತವಾಗಿದೆ. ‘ ಬೆಳ್ಳಗಿರುವುದೆಲ್ಲ ಹಾಲಲ್ಲ, ಹಸಿರು ಶಾಲು ಹೊದ್ದವರೆಲ್ಲ ರೈತರ ಪರವಲ್ಲ ‘ ಎಂಬುದನ್ನು ಸಿಎಂ ಸಾಬೀತುಪಡಿಸಿದ್ದಾರೆ ಎಂದು ಟ್ವಿಟ್ ಮಾಡುವ ಮೂಲಕ ರಾಜ್ಯ ಸರಕಾರಕ್ಕೆ ಛಾಟಿ ಬೀಸಿದ್ದಾರೆ.
ಕಲಬುರಗಿ ಜಿಲ್ಲೆಯ ಬಿಜೆಪಿ ನಾಯಕರ ದಿವ್ಯಮೌನವನ್ನು ಟೀಕಿಸಿರುವ ಶಾಸಕ ಪ್ರಿಯಾಂಕ್ ಖರ್ಗೆ, ತೊಗರಿ ಬೆಳೆಗಾರರ ಸಂಕಷ್ಟದ ಕುರಿತು ಜಿಲ್ಲೆಯ ಯಾವ ಬಿಜೆಪಿ ನಾಯಕರೂ ತುಟಿಬಿಚ್ಚಿಲ್ಲ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 550 ರೂವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು ಎಂದು ಸ್ಮರಿಸಿದ್ದಾರೆ.
ರಾಜ್ಯ ಸರಕಾರ ಇನ್ನಾದರೂ ಪ್ರೋತ್ಸಾಹ ಧನ ಘೋಷಿಸಿ ರೈತರ ನೆರವಿಗೆ ಧಾವಿಸಲಿ ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…