ಬಿಸಿ ಬಿಸಿ ಸುದ್ದಿ

ನಾಲ್ಕು ದಿನಗಳ ರಾಷ್ಟ್ರೀಯ ಯುವಜನೋತ್ಸವಕ್ಕೆ ತೆರೆ

ಕಲಬುರಗಿ: ಯುವಕರು ಶಕ್ತಿಯ ಸಂಕೇತ, ಸಮಾಜದ ಹಿತರಕ್ಷಣೆಗಾಗಿ, ಕೆಟ್ಟದ್ದÀನ್ನು ತಡೆಯಲು ಯುವಕರು ಶಕ್ತಿ ಉಪಯೋಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ.ರಾಜಾ ಅವರು ಕರೆ ನೀಡಿದರು.

ಸೋಮವಾರ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ವತಿಯಿಂದ ಏರ್ಪಡಿಸಲಾದ ರಾಷ್ಟ್ರಿಯ ಸೇವಾ ಯೋಜನೆ ರಾಜ್ಯಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯಂತಹÀ ಕಾರ್ಯಕ್ರಮಗಳಲ್ಲಿ ಭಾಗಹಿಸುವಿಕೆಯಿಂದ ಯುವಕರಲ್ಲಿ ಶಕ್ತಿ ಬಲಿಷ್ಠಗೊಳ್ಳುತ್ತದೆ. ಆಗ ನಿಮ್ಮನ್ನು ನೀವು ಅರಿಯುವ ಅವಕಾಶ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಜೀವನದಲ್ಲಿ ಗುರಿ ಇಟ್ಟುಕೊಂಡು ಕಾರ್ಯ ಸಾಧನೆಗೆ ಮುಂದಾಗಿ, ತಾಂತ್ರಿಕತೆಯನ್ನು ಸದುಪಯೋಗ ಪಡಿಸಿಕೊಂಡು ಐಎಎಸ್, ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಗೊಳಿಸಿಕೊಳ್ಳಿ ಎಂದ ಅವರು ಸ್ಪರ್ಧೆ ಮಾಡಲು ಹಿಂಜರಿಕೆ ಬೇಡ, ಸೋಲು ಗೆಲುವು ಮಾಮೂಲಿ ಎಂದು ತಿಳಿಸಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪದನಿಮಿತ್ತ ಜಂಟಿ ಕಾರ್ಯದರ್ಶಿ ಮತ್ತು ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಮಾತನಾಡಿ, ಪಠ್ಯ ಚಟುವಟಿಕೆಗಿಂತ ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಬಹಳ ಮುಖ್ಯವಾಗುತ್ತದೆ. ಕೇವಲ ಜ್ಞಾನ ನೀಡುವುದು ಶಿಕ್ಷಣದ ಕೆಲಸವಲ್ಲ, ಅದು ವ್ಯಕ್ತಿ ವಿಕಸನಕ್ಕೆ ಅವಶ್ಯವಿರುವ ಹೊರಗಿನ ಶಿಕ್ಷಣ ಅಭ್ಯಾಸ ನೀಡುವ ಕಾರ್ಯವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಪೆÇ್ರ. ಸಂಜೀವಕುಮಾರ ಕೆ. ಎಂ. ಅವರು ಮಾತನಾಡಿ, ಯುವಜನೋತ್ಸವದಂತಹ ಕಾರ್ಯಕ್ರಮಗಳು ಮುಂದಿನ ಜೀವನದ ಗುರಿಯತ್ತ ಕೊಂಡೊಯ್ಯುತ್ತದೆ. ಒಂದೇ ರಾತ್ರಿಯಲ್ಲಿ ಯಾರೂ ಸಹ ಸ್ಟಾರ್ ಆಗೊಲ್ಲ, ಕಷ್ಟಪಟ್ಟು ಮೇಲೆ ಬರಬೇಕು. ಬಹುಮಾನಗಳು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ ಮುಂದೆ ಸಾಗಲು ಸಹಾಯಕವಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ನಲ್ಲಿ ಸಾಧನೆ ಗೈದು ಸರ್ಕಾರಿ ಸೇವೆ ಸಲ್ಲಿಸುತ್ತಿರುವ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ. ಮಹೇಶ ಪಾಟೀಲ ಹಾಗೂ ರಾಜ್ಯ ಲೆಕ್ಕ ಮತ್ತು ಪರಿಶೋಧನಾ ಇಲಾಖೆಯ ಲೆಕ್ಕ ಪರಿಶೋಧನಾ ಅಧಿಕಾರಿ ಕವಿತಾ ಬಡಿಗೇರ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು. ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ಎನ್.ಎಸ್.ಎಸ್. ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪೆÇ್ರ. ಚಂದ್ರಕಾಂತ ಎಂ. ಯಾತನೂರು, ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ, ಗುಲಬರ್ಗಾ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್ ಪೆÇ್ರ. ಕೆ. ಶ್ರೀರಾಮುಲು, ಗುಲಬರ್ಗಾ ವಿಶ್ವವಿದ್ಯಾಲಯ ವಿತ್ತಾಧಿಕಾರಿ ಪೆÇ್ರ. ಬಿ. ವಿಜಯ ಹಾಗೂ ವಿವಿಧ ವಿಭಾಗದ ಡೀನ್ ಗಳು, ಉಪನ್ಯಾಸಕರು, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಎನ್.ಎಸ್.ಎಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುಲಬರ್ಗಾ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಪೆÇ್ರ. ರಮೇಶ ಲಂಡನಕರ್ 4 ದಿನಗಳ ರಾಷ್ಟ್ರೀಯ ಯುವಜನೋತ್ಸವದ ವರದಿ ವಾಚನ ಮಾಡಿ, ವಂದಿಸಿದರು. ನಿವೃತ್ತ ಉಪನ್ಯಾಸಕಿ ಬಿಡದಿ ಚಂದ್ರಭಾಗ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ವಿದ್ಯಾರ್ಥಿಗಳು ನಾಡಗೀತೆ ಹಾಗೂ ಎನ್.ಎಸ್.ಎಸ್. ಗೀತೆ ಹಾಡಿದರು. ವಿಜಯಪುರದ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಡಾ. ಮಲ್ಲಿಕಾರ್ಜುನ ಕಮತಗಿ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ ಬಹುಮಾನ: ಕಳೆದ ನಾಲ್ಕು ದಿನದಿಂದ ನಡೆದ ಯುವಜನೋತ್ಸವದ ಒಟ್ಟಾರೆ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪ್ರಥಮ ಬಹುಮಾನ ಗಳಿಸಿದರೆ, ಗುಲಬರ್ಗಾ ವಿಶ್ವವಿದ್ಯಾಲಯ ಎರಡನೇ ಸ್ಥಾನ (ರನ್ನರ್‍ಅಪ್) ಗಳಿಸಿತು. ಇನ್ನು ವಿಜಯಪುರದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಇದೇ ಸಂದರ್ಭದಲ್ಲಿ ಯುವಜನೋತ್ಸವ ಅಂಗವಾಗಿ ಜರುಗಿದ ಯುವಜನೋತ್ಸವ ಸಾಂಸ್ಕøತಿಕ-ಭಾವೈಕ್ಯತಾ ಮೆರವಣಿಗೆ, ಸುಗಮ ಸಂಗೀತ (ವೈಯಕ್ತಿಕ), ಸಂಗೀತ ಸ್ಪರ್ಧೆ (ಗುಂಪು), ಪ್ರಹಸನ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ನೃತ್ಯ ಸ್ಪರ್ಧೆ (ವೈಯಕ್ತಿಕ) ವಸ್ತು ಪ್ರದರ್ಶನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳನ್ನು ಬಹುಮಾನಗಳನ್ನು ನೀಡಲಾಯಿತು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago