ಕಲಬುರಗಿಯಲ್ಲಿ ಹಕ್ಕಿಜ್ವರದ ಪ್ರಕರಣಗಳು ಕಂಡು ಬಂದಿಲ್ಲ: ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ

0
110

ಕಲಬುರಗಿ: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರದ ಪ್ರಕರಣಗಳು ಕಂಡು ಬಂದಿರುವುದಿಲ್ಲ. ಸಾರ್ವಜನಿಕರು ಯಾವುದೇ ಭಯ ಹಾಗೂ ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗ ತುರ್ತು ನಿರ್ವಾಹಣೆ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಯಾವುದೇ ಪಕ್ಷಿಗಳು ಮರಣ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Contact Your\'s Advertisement; 9902492681

ಪಕ್ಷಿ ವೀಕ್ಷಕರು, ಪಕ್ಷಿ ಪ್ರೇಮಿಗಳು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಪಕ್ಷಿಗಳು ಮರಣ ಹೊಂದಿರುವುದನ್ನು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪಶು ಸಂಗೋಪನಾ ಇಲಾಖೆಗೆ ಅಥವಾ ಸಹಾಯವಾಣಿ ಸಂಖ್ಯೆ 08472-278627ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದರು.

ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮುಂಜಾಗೃತಾ ಕ್ರಮಗಳನ್ನು ಕ್ರಮಕೈಗೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು. ಕೋಳಿ ಮಾಂಸ ಹಾಗೂ ತತ್ತಿಯನ್ನು ಚೆನ್ನಾಗಿ ಬೇಯಿಸಿ ಸೇವಿಸಿದ್ದಲ್ಲಿ ಮನುಷ್ಯರಿಗೆ ಯಾವುದೇ ರೀತಿಯ ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ವಿಭಾಗೀಯ ಪ್ರಾಣಿ ರೋಗ ಅಧ್ಯಯನ ಕೇಂದ್ರದ ವಿಜ್ಞಾನಿಗಳಾದ ಶೇಷರಾವ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕರ ಕಚೇರಿಯ (ತಾಂತ್ರಿಕ) ಪಶುವೈದ್ಯಾಧಿಕಾರಿ ಡಾ. ಯಲ್ಲಪ್ಪ ಎಸ್.ಇಂಗಳೆ, ಜಿಮ್ಸ್‍ನ ಮೈಕ್ರೋಬಯಾಲಜಿ ಪ್ರೊಫೆಸರ್, ಸಾರಿಗೆ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here