ಸದೃಢ ರಾಷ್ಟ್ರ ನಿರ್ಮಾಣದಲ್ಲಿ ರೈತರು, ಕಾರ್ಮಿಕರ ಪಾತ್ರ ಪ್ರಮುಖವಾದುದು: ನ್ಯಾ. ಜಿ.ಆರ್.ಶೆಟ್ಟರ್

0
23

ಕಲಬುರಗಿ: ರೈತರು ಮತ್ತು ಕಾರ್ಮಿಕರು ಈ ದೇಶದ ಬೆನ್ನೆಲುಬು. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ರೈತರು ಮತ್ತು ಕಾರ್ಮಿಕ ವರ್ಗದವರ ಪಾತ್ರ ಪ್ರಮುಖವಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿ.ಆರ್.ಶೆಟ್ಟರ್ ಅವರು ಶ್ಲಾಘಿಸಿದರು.

ನಗರದ ಎಸ್.ಎಸ್.ಎಲ್ ಕಾನೂನು ಮಹಾ ವಿದ್ಯಾಲಯ ಕಾಲೇಜು ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಇಲಾಖೆ ಮತ್ತು ವಿವಿಧ ಮಂಡಳಿಗಳಿಂದ ವಿವಿಧ ಯೋಜನೆಗಳ ಅನುಷ್ಠಾನಗೊಳಿಸಲು ಕಾರ್ಮಿಕ ಇಲಾಖೆಯ ಅಧಿಕಾರಿ, ನಿರೀಕ್ಷಕರು, ಕಾರ್ಮಿಕ ಬಂಧುಗಳಿಗೆ ಹಾಗೂ ಸಿಬ್ಬಂದಿಗೆ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ರೈತರು ಹಾಗೂ ಕಾರ್ಮಿಕರನ್ನು ಸದೃಢಗೊಳಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಹೀಗಾಗಿ ಸರ್ಕಾರ ಅವರಿಗೆ ನೇರವಾಗಿ ಕೆಲಸ ಮಾಡಲು ಅವರ ಕುಂದು-ಕೊರತೆಗಳನ್ನು ಆಲಿಸಲು ಕಾರ್ಮಿಕ ಇಲಾಖೆ ಇದೆ ಎಂದರು.

ಶೋಷಿತರು ಮತ್ತು ಕಾರ್ಮಿಕ ವರ್ಗದವರಿಗೆ ಹಲವು ಕಾನೂನು ಸೌಕರ್ಯಗಳಿದ್ದರೂ ಅವರಿಗೆ ಅರಿವಿರುವುದಿಲ್ಲ. ಆದ್ದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಇವರೆಲ್ಲರ ಕುರಿತು ನಾವು ಕಾಳಜಿವಹಿಸುವುದು ಅಗತ್ಯವೆಂದರು. ಅಲ್ಲದೇ, ಪ್ರತಿ ಹಳ್ಳಿ-ಹಳ್ಳಿ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಕಾನೂನು ಸೇವಾ ಸೌಲಭ್ಯ, ವಿಮಾ ಸೌಕರ್ಯ ಕುರಿತು ತಿಳಿಸಬೇಕು ಎಂದು ಹೇಳಿದರು.

ಕಾರ್ಯಾಗಾರವನ್ನು ನಡೆಸಿಕೊಟ್ಟ ಬೆಂಗಳೂರಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ಉಪ ಕಾರ್ಯದರ್ಶಿಗಳಾದ ಕೆ.ಎಲ್.ಜಾನ್ಸನ್ ಅವರು, ಕಾರ್ಮಿಕ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಹಾಗೂ ಕಾರ್ಮಿಕ ಬಂಧುಗಳಿಗೆ ವಿವಿಧ ಯೋಜನೆಗಳು ಸೇರಿದಂತೆ, ಕಾರ್ಮಿಕರ ಇಲಾಖೆಯ ವ್ಯವಸ್ಥೆ, ಕಾನೂನು ಸೇವಾ ಸೌಲಭ್ಯ ಹಾಗೂ ಕಾರ್ಮಿಕ ಇಲಾಖೆಗೆ ಸಂಬಂಧಿಸಿ ಪ್ರಮುಖ ಕಾಯ್ದೆಗಳ ಕುರಿತು ಪಿಪಿಟಿ ಮೂಲಕ ವಿವರಿಸಿದರು.

ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ ಅವರು ಕಾರ್ಯಾಗಾರದ ಅಧ್ಯಕ್ಷತೆವಹಿಸಿ, ಪ್ರಾಸ್ತ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಉಪ-ವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಎಸ್.ಎಸ್.ಎಲ್ ಕಾನೂನು ಮಹಾ ವಿದ್ಯಾಲಯದ ಉಪ ಪ್ರಾಂಶುಪಾಲರಾದ ರೇಣುಕಾ, ಎನ್.ಸಿ.ಎಲ್.ಪಿ.ಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಹಿರಿಯ ಕಾರ್ಮಿಕ ನಿರೀಕ್ಷರಾದÀ ರವೀಂದ್ರ ಕುಮಾರ್, ದತ್ತಾತ್ರೇಯ ಗಾದಾ ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ಹಾಗೂ ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here