ಬಿಸಿ ಬಿಸಿ ಸುದ್ದಿ

ಎ.ಸಿ.ಬಿ. ಅಧಿಕಾರಿಗಳಿಂದ ಜನಸಂಪರ್ಕ ಸಭೆ

ಕಲಬುರಗಿ: ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು 2021ರ ಜನವರಿ ತಿಂಗಳಲ್ಲಿ ಕಲಬುರಗಿ ಜಿಲ್ಲೆಯ ಕೆಳಕಂಡ ತಾಲೂಕುಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಿದ್ದಾರೆ ಎಂದು ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಆರಕ್ಷಕ ಉಪಾಧೀಕ್ಷಕರಾದ ವಿರೇಶ ಅವರು ತಿಳಿಸಿದ್ದಾರೆ.

ಪೊಲೀಸ್ ಇನ್ಸ್‍ಪೆಕ್ಟರ್ ಮಹ್ಮದ ಇಸ್ಮಾಯಿಲ್ (ಮೊಬೈಲ್ ಸಂಖ್ಯೆ 9480806309) ಜನವರಿ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿತ್ತಾಪುರ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಶಹಾಬಾದ ಪ್ರವಾಸಿ ಮಂದಿರ ಹಾಗೂ ಜನವರಿ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅಫಜಲಪುರ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಪೊಲೀಸ್ ಇನ್ಸ್‍ಪೆಕ್ಟರ್ ರಾಘವೇಂದ್ರ (ಮೊಬೈಲ್ ಸಂಖ್ಯೆ 9480806310) ಅವರು ಜನವರಿ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜೇವರ್ಗಿ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಯಡ್ರಾಮಿ ಪ್ರವಾಸಿ ಮಂದಿರ, ಜನವರಿ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿಂಚೋಳಿ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಾಳಗಿ ಪ್ರವಾಸಿ ಮಂದಿರ ಹಾಗೂ ಜನವರಿ 19 ರಂದು ಬೆಳಿಗ್ಗೆ 11 ರಂದು ಸಂಜೆ 4 ಗಂಟೆಯವರೆಗೆ ಕಮಲಾಪುರ ಪಂಚಾಯತ್ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಪೊಲೀಸ್ ಠಾಣೆಯ ಡಿ.ಎಸ್.ಪಿ.ಯವರಾದ ವಿರೇಶ (ಮೊಬೈಲ್ ಸಂಖ್ಯೆ 9480806240) ಅವರು ಜನವರಿ 16 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯರೆಗೆ ಸೇಡಂ ಪ್ರವಾಸಿ ಮಂದಿರ ಹಾಗೂ ಜನವರಿ 18 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಆಳಂದ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago