ಸುರಪುರ: ತಾಲೂಕಿನ ಬೇವಿನಾಳ ಗ್ರಾಮದಲ್ಲಿ ರಾಜಕೀಯ ವೈಷಮ್ಯದಿಂದ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕಾಯ್ದ ಎಣ್ಣೆಯಲ್ಲಿ ನೂಕಿದ್ದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬೇವಿನಾಳ ಗ್ರಾಮದ ಮರೆಪ್ಪ ಪೊಲೀಸ್ ಗೌಡರ್ ಎಂಬ ೪೫ ವರ್ಷದ ವ್ಯಕ್ತಿ ತನ್ನ ಮನೆಯಿಂದ ಕುರಿ ದೊಡ್ಡಿಯ ಕಡೆಗೆ ಹೊರಟ ಸಂದರ್ಭದಲ್ಲಿ ದಾರಿಯಲ್ಲಿ ಬೇರೊಬ್ಬರ ಮನೆಯಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯುತ್ತಿತ್ತು,ಈ ಮನೆಯ ಬಳಿಯಲ್ಲಿ ಅಡುಗೆ ಮಾಡಿ ನಂತರ ಉಳಿದ ಕಾಯ್ದ ಎಣ್ಣೆಯು ಕಡಾಯಿಯಲ್ಲಿ ಇರಿಸಲಾಗಿತ್ತು.
ಈ ಮನೆಯ ಮುಂದೆ ಹೊರಟಿದ್ದ ಮರೆಪ್ಪ ಪೊಲೀಸ್ ಗೌಡರ್‌ಗೆ ಕೆಲ ಪ್ರಭಾವಿ ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ವಿರುಧ್ಧವೆ ಚುನಾವಣೆಯಲ್ಲಿ ಕೆಲಸ ಮಾಡುತ್ತಿ ಎಂದು ಗದರಿಸಿ ನಂತರ ಮರೆಪ್ಪನನ್ನು ತಳ್ಳಿದಾಗ ಮರೆಪ್ಪ ಕಾಯ್ದ ಎಣ್ಣೆಯ ಕಡಾಯಿಯಲ್ಲಿ ಬಿದ್ದ ಪರಿಣಾಮ ಮರೆಪ್ಪನು ಗಂಭೀರವಾಗಿ ಗಾಯಗೊಂಡಿದ್ದು ಇಡೀ ದೇಹವೆಲ್ಲ ಸುಟ್ಟು ಹೋಗಿ ಚರ್ಮ ಕಿತ್ತಿದೆ.
ನಂತರ ಈತನ ಪತ್ನಿ ಬೇರೆಯವರ ಸಹಾಯದೊಂದಿಗೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…