ಜನವರಿ 21ರಂದು ಉದ್ಯೋಗ ಮೇಳ

0
95

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕಲಬುರಗಿ ನಗರದ ಎಂ.ಎಸ್.ಕೆ.ಮಿಲ್ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 21ರಂದು ಬೆಳಗಿನ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಈ ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮಾ, ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು  ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here