ಕಲಬುರಗಿ: ಜನವಿರೋಧಿ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ಸಮಾವೇಶ ಹಮ್ಮಿಕೊಳಲಾಗುತ್ತಿದೆ ಎಂದು ಕೆಪಿಪಿಸಿಸಿ ಕಾರ್ಯಧ್ಯಕ್ಷರಾದ ಈಸ್ವರ ಖಂಡ್ರೆ ತಿಳಿಸಿದರು.
ಇಂದು ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 18 ರಂದು ಕಲಬುರಗಿಯಲ್ಲಿ ಪಕ್ಷದ 23 ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಸಂಕಲ್ಪಯಾತ್ರೆ ಸಮಾವೇಶ ಅಯೋಜಿಸಲಾಗಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ್ಕೆ ಮಲತಾಯಿ ಧೋರಣೆ: ಕಲ್ಯಾಣ ಕರ್ನಾಟಕ ಕೇವಲ ಹೆಸರಿಗಾಗಿ ನಾಮಕರ ಇದುವರೆಗೆ ಯಾವುದೇ ಅಭಿವೃದ್ಧಿಯಾಗುವಂತಹ ಸಭೆ ಸಹ ನಡೆಸಿಲ್ಲ. ಉದ್ಯೋಗ ನೇಮಕಾತಿ ಹಾಗೂ ರೈತರ ಬಗ್ಗೆ ಯಾವುದೇ ಯೋಜನೆಗಳು 371j ಕಲಾಂ ಅನುಷ್ಠಾನ ಮಾಡುತ್ತಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ. ಭಾಗದಲ್ಲಿ ಪ್ರವಾಹಬಂದು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಸರಕಾರದಿಂದ ನಯಾ ಪೈಸಾ ಪರಿಹಾರ ಸಿಕ್ಕಿಲ್ಲ. ಕನಿಷ್ಠ ಪ್ರಗತಿ ಪರಿಶೀಲನೆ ಸಭೆ ನಡೆಸಿಲ್ಲ ಈ ಮೂಲಕ ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರಕಾರ ಮಲತಾಯಿ ಧೋರಣೆ ತೋರುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಪರಿಹಾರ ಘೋಷಣೆ ಮಾಡಬೇಕು. ಬೆಳೆ ನಷ್ಟ ಅನುಭವಿಸಿದ ರೈತರಿಗೆ ವಿಮೆ ಕಂಪನಿಗಳು ಪರಿಹಾರ ನೀಡುತ್ತಿಲ್ಲ ಹೆಸರಿಗೆ ಮಾತ್ರ ಪ್ರಧಾನ ಮಂತ್ರಿಗಳು ಪ್ರಚಾರಕ್ಕೆ ಮಾತ್ರ ಸಿಮಿತವಾಗಿದ್ದು, ಇಂತಹ ಜನವಿರೋಧಿ ನೀತಿಗಳ ವಿರುದ್ಧ ಸಂಲ್ಪಯಾತ್ರೆ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರು, ಪಕ್ಷದ ಜಿಲ್ಲಾ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಶರಣು ಮೋದಿ, ಸುಭಾಷ್ ರಾಠೋಡ್ ಸೇರಿದಂತೆ ಮುಂತಾದವರು ಇದ್ದರು.