ಬೋರವೆಲ್ ದುರಸ್ತಿಗೊಳಿಸಲು ಕರವೇ ಆಗ್ರಹ

0
64

ಕಲಬುರಗಿ: ನಗರದ ವಾರ್ಡ್ ನಂ. 1 ರ ವ್ಯಾಪ್ತಿಯಲ್ಲಿ ಬರುವ ರಾಮನಗರ ಬಡಾವಣೆಯಲ್ಲಿನ ಕೆಟ್ಟು ಹೋಗಿರುವ ಬೋರವೆಲ್ ದುರಸ್ತಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.ಆದ್ದರಿಂದ ಕೂಡಲೇ ಇಲ್ಲಿನ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ರವರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಕುರಿತು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ, ನಗರದ ವಾರ್ಡ್ ನಂ.1 ರ ವ್ಯಾಪ್ತಿಯಲ್ಲಿ ಬರುವ ರಾಮನಗರ ಬಡಾವಣೆಯಲ್ಲಿ ಸುಮಾರು ವರ್ಷಗಳಿಂದ ಕುಡಿಯುವ ನೀರಿನ ಬೋರವೆಲ್ ಕೆಟ್ಟು ಹೋಗಿದೆ ಇದರಿಂದ ಇಲ್ಲಿನ ಜನರಿಗೆ ನೀರಿನ ಸಮಸ್ಯೆ ಹೆಚ್ಚಾಗಿತ್ತಿದೆ. ಈ ವಿಷಯದ ಕುರಿತು ಈಗಾಗಲೇ ಪಾಲಿಕೆ ಆಯುಕ್ತರಿಗೆ ಮನವಿಯನ್ನು ಬಡಾವಣೆಯ ನಾಗರಿಕರು ಮನವಿ ಪತ್ರ ಸಲ್ಲಿಸಿದ್ದಾರೆ.ಆದರೆ ಇದುವರೆಗೂ ಪಾಲಿಕೆಯ ಅಧಿಕಾರಿಗಳು ಇದಕ್ಕೆ ಸ್ಪಂದಿಸುತ್ತಿಲ್ಲ. ಈ ವಿಷಯದ ಕುರಿತು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಈ ಬಡಾವಣೆಯಲ್ಲಿನ ಕೆಟ್ಟು ಹೋಗಿರುವ ಬೋರವೆಲ್ ಯನ್ನು ದುರಸ್ಥಿಗೊಳಿಸಿ ಅನೂಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

Contact Your\'s Advertisement; 9902492681

ಒಂದು ವೇಳೆ ವಾರದೊಳಗೆ ಕ್ರಮಕೈಗೊಳ್ಳದಿದ್ದಲ್ಲಿ‌ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ರಾಮನಗರ ಬಡಾವಣೆಯ ಜನರಿಗೆ ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ವಾರ್ಡಿನ ಜನತೆ ಮಹಾನಗರ ಪಾಲಿಕೆಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಜೊತೆಗೆ ಈ ಬೋರವೆಲ್ ನಿಂದ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ. ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಬೋರವೆಲ್ ದುರಸ್ಥಿಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು. ಒಂದು ವೇಳೆ ಅಲ್ಲಿನ ಜನರಿಗೆ ನೀರಿನ ಸೌಲಭ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here