ಕಲಬುರಗಿ: ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಂದು ಸಚಿವ ಸ್ಥಾನ ನೀಡದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಮಲತಾಯಿ ಧೋರಣೆ ಅನುಸರಿಸಿದ್ದಾರೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಆರೋಪಿಸಿದ್ದಾರೆ.
2018ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚಿನ ಬಿಜೆಪಿ ಶಾಸಕರು ಆಯ್ಕೆ ಆಗಿದ್ದಾರೆ.ಒಂದು ರೀತಿಯಲ್ಲಿ ಈ ಭಾಗ ಬಿಜೆಪಿ ಪಕ್ಷದ ಗಡ ಎಂದು ಹೇಳುತ್ತಾರೆ.ಆದರೆ ಮುಖ್ಯಮಂತ್ರಿಗಳಿಗೆ ಗೊತ್ತಿದ್ದರೂ ಪದೇ ಪದೇ ಅನ್ಯಾಯ ಮಾಡುತ್ತಿದ್ದಾರೆ.
ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ಈ ಹಿಂದೆ ಇದ್ದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಂತ್ರಿ ಸ್ಥಾನ ನೀಡಲು ಚೌಕಾಶಿ ಮಾಡಿದ್ದರಿಂದ ಅಭಿವೃದ್ಧಿ ಹೇಗೆ ಸಾಧ್ಯ? ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಗೆ ಕಾಟಾಚಾರಕ್ಕೆ ಉಸ್ತುವಾರಿ ಸಚಿವರನ್ನು ನೇಮಿಸಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ.ಕೂಡಲೇ ಮುಖ್ಯಮಂತ್ರಿಗಳು ಮತ್ತೋಮ್ಮೆ ಸಂಪುಟ ವಿಸ್ತರಣೆ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನೀಡಬೇಕು.
ಇಲ್ಲದಿದ್ದಲ್ಲಿ ಇದಕ್ಕೆ ವಿರುದ್ಧವಾಗಿ ಕಲಬುರಗಿಯ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…