ಬಿಸಿ ಬಿಸಿ ಸುದ್ದಿ

ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ ಸ್ಥಾನಗಳ ಮೀಸಲಾತಿಗೆ ತಾಲೂಕುವಾರು ದಿನಾಂಕ ನಿಗದಿ

ಕಲಬುರಗಿ: ರಾಜ್ಯ ಚುನಾವಣಾ ಆಯೋಗವು ಕಲಬುರಗಿ ಜಿಲ್ಲೆ ತಾಲೂಕುವಾರು ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿದ್ದು, ಈ ನಿಟ್ಟಿನಲ್ಲಿ ಮೀಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡಬೇಕಾಗಿದೆ. ಈ ಪ್ರಕ್ರಿಯೆ ನಡೆಯಲು ಜಿಲ್ಲೆಯ ಈ ಕೆಳಕಂಡ ತಾಲೂಕುವಾರು ದಿನಾಂಕ, ಸಮಯ ಹಾಗೂ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ವಿ.ವಿ.ಜೋತ್ಸ್ನಾ ಅವರು ತಿಳಿಸಿದ್ದಾರೆ.

ಶಹಾಬಾದ ತಾಲೂಕು: ಜನವರಿ 15 ರಂದು ಬೆಳಿಗ್ಗೆ 10 ಗಂಟೆಗೆ ಶಹಾಬಾದ ತಹಶೀಲ್ದಾರರ ಕಚೇರಿ ಎದುರಿಗೆಯಿರುವ ಗಂಗಮ್ಮ ಮರಗೋಳ ಕಾಲೇಜು.

ಚಿಂಚೋಳಿ ತಾಲೂಕು: ಜನವರಿ 16 ರಂದು ಬೆಳಿಗ್ಗೆ 10 ಗಂಟೆಗೆ ಚಿಂಚೋಳಿಯ ಸಿ.ಬಿ. ಪಾಟೀಲ್ ಪಿ.ಯು.ಕಾಲೇಜು.

ಕಾಳಗಿ ತಾಲೂಕು: ಜನವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಕಾಳಗಿಯ ಕಾಳೇಶ್ವರ ದೇವಸ್ಥಾನದ ಕಾಳೇಶ್ವರ ಕಲ್ಯಾಣ ಮಂಟಪ.

ಜೇವರ್ಗಿ ತಾಲೂಕು: ಜನವರಿ 17 ರಂದು ಮಧ್ಯಾಹ್ನ 2 ಗಂಟೆಗೆ ಜೇವರ್ಗಿಯ ಭೂತಪೂರ ಕಲ್ಯಾಣ ಮಂಟಪ.

ಯಡ್ರಾಮಿ ತಾಲೂಕು: ಜನವರಿ 17 ರಂದು ಬೆಳಿಗ್ಗೆ 10 ಗಂಟೆಗೆ ಯಡ್ರಾಮಿಯ ಕಲ್ಯಾಣಿ ಕಾಂಪ್ಲೆಕ್ಸ್‍ನ ಕಲ್ಯಾಣಿ ಕಲ್ಯಾಣ ಮಂಟಪ.

ಆಳಂದ ತಾಲೂಕು: ಜನವರಿ 18 ರಂದು ಬೆಳಿಗ್ಗೆ 10 ಗಂಟೆಗೆ ಆಳಂದ ಗುರು ಭವನ.

ಅಫಜಲಪುರ ತಾಲೂಕು: ಜನವರಿ 18 ರಂದು ಮಧ್ಯಾಹ್ನ 2 ಗಂಟೆಗೆ ಅಫಜಲಪುರದ ನ್ಯಾಷನಲ್ ಫಂಕ್ಷನ್ ಹಾಲ್.

ಸೇಡಂ ತಾಲೂಕು: ಜನವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಸೇಡಂ ಸುವರ್ಣ ಸೌಧ ಕಟ್ಟಡ.

ಚಿತ್ತಾಪುರ ತಾಲೂಕು: ಜನವರಿ 21 ರಂದು ಮಧ್ಯಾಹ್ನ 2 ಗಂಟೆಗೆ ಚಿತ್ತಾಪುರ ರಾವೂರ ರಸ್ತೆಯಲ್ಲಿರುವ ಕಿಂಗ್ ಪ್ಯಾಲೇಸ್ ಫಂಕ್ಷನ್ ಹಾಲ್.

ಕಲಬುರಗಿ ತಾಲೂಕು: ಜನವರಿ 22 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರ

ಕಮಲಾಪುರ ತಾಲೂಕು: ಜನವರಿ 22 ಬೆಳಿಗ್ಗೆ 10 ಗಂಟೆಗೆ ಕಮಲಾಪುರದ ಬಸವೇಶ್ವರ ಸರ್ಕಲ್ ಬಳಿ ಇರುವ ರೇವಣಸಿದ್ದೇಶ್ವರ ಕಲ್ಯಾಣ ಮಂಟಪ.

ಸಂಬಂಧಪಟ್ಟ ತಾಲೂಕಿನ ಎಲ್ಲಾ ಚುನಾಯಿತರಾದ ಗ್ರಾಮ ಪಂಚಾಯಿತಿಗಳ ಸದಸ್ಯರು ಚುನಾವಣಾಧಿಕಾರಿಗಳಿಂದ ನೀಡಲಾದ ಪ್ರಮಾಣಪತ್ರದೊಂದಿಗೆ ನಿಗದಿಪಡಿಸಿದ ಸಮಯಕ್ಕಿಂತ 1 ಗಂಟೆ ಮುಂಚಿತವಾಗಿ ಅವರವರ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಲಾದ ಸ್ಥಾನದಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಕುಳಿತುಕೊಳ್ಳಲು ಲಿಖಿತವಾಗಿ ಆಹ್ವಾನ ನೀಡಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಬೇಕು.

ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಪ್ರೊಜೆಕ್ಟರ್, ಪ್ರಿಂಟರ್, ಕಂಪ್ಯೂಟರ್, ಲ್ಯಾಪ್‍ಟಾಪ್, ಸ್ಕ್ರೀನ್, ಎರಡು ಆಪರೇಟರ್ ಹಾಗೂ ಇನ್ನಿತರ ಮೂಲಭೂತ ಲೇಖನ ಸಾಮಗ್ರಿಗಳು ಕಲ್ಪಿಸಬೇಕು. ಚುನಾವಣಾ ಆಯೋಗದ ಸೂಚನೆಯಂತೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಸೆರೆ ಹಿಡಿಯಲು ವಿಡಿಯೋಗ್ರಾಫರ್ ವ್ಯವಸ್ಥೆ ಮಾಡಿ, ಚಿತ್ರೀಕರಣದ ಸಿಡಿ ಸಿದ್ಧಪಡಿಸಿ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಸಂಬಂಧಪಟ್ಟ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಹಾಗೂ ಮಾಸ್ಕ್ ವ್ಯವಸ್ಥೆ ಮಾಡಿಸಬೇಕು. ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಮಾತ್ರ ಗುರುತಿಸಿ ಅವರು ಒಳಗಡೆ ಬೀಡಲು ಸೂಕ್ತ ಸಿಬ್ಬಂದಿಗಳನ್ನು ನೇಮಿಸಬೇಕು. ಈ ಸ್ಥಳದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಕಡಿತಗೊಳ್ಳದಂತೆ ಹಾಗೂ ವಿದ್ಯುತ್ ವ್ಯತ್ಯಯವಾದಲ್ಲಿ ಜನರೇಟರ್ ವ್ಯವಸ್ಥೆ ಮಾಡಬೇಕಲ್ಲದೇ ಕುಡಿಯುವ ನೀರಿನ ಸೌಲಭ್ಯ ಸಹ ಕಲ್ಪಿಸಬೇಕು.

ಸಂಬಂಧಪಟ್ಟ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಹಶೀಲ್ದಾರರ ಸಹಯೋಗದೊಂದಿಗೆ ಯಾವುದೇ ಲೋಪದೋಷವಾಗದಂತೆ ಮೇಲ್ಕಂಡ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

11 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago