ಕಲಬುರಗಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಇದೇ ಜನವರಿ 14 ರಂದು ಬೆಳಿಗ್ಗೆ 10 ಗಂಟೆಗೆ ಅಫಜಲಪೂರ ತಾಲೂಕಿನ ಘೂಳನೂರ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಹಿರೇಮಠದಲ್ಲಿ “ಸುಗ್ಗಿ ಹುಗ್ಗಿ 2020-21” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ರಾಜ್ಯದ ಉಪ ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ.ಎಂ.ಕಾರಜೋಳ ಅವರು ಸುಗ್ಗಿ ಹುಗ್ಗಿ ಕಾರ್ಯಕ್ರಮ ಉದ್ಘಾಟಿಸುವರು. ಕಲಬುರಗಿ ಶಹಾಬಜಾರದ ಶ್ರೀಶೈಲಂ ಸಾರಂಗ ಮಠದ ಹಾಗೂ ಸುಲಫಲ ಮಠದ ಪರಮಪೂಜ್ಯ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕಲಬುರಗಿ ಶಹಬಜಾರದ ಚವದಾಪೂರಿ ಹಿರೇಮಠದ ಶ್ರೀ ಷ.ಬ್ರ. ರಾಜಶೇಖರ ಶಿವಚಾರ್ಯರು ಸಮ್ಮುಖದಲ್ಲಿ ಅಫಜಲಪುರ ತಾಲೂಕಿನ ಶಾಸಕ ಎಂ.ವೈ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಘನ ಉಪಸ್ಥಿತಿಯಲ್ಲಿ ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕ ಡಾ.ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಸೇಡಂ, ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಸೇಡಂ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಕಲಬರುಗಿ ಸಂಸದ ಡಾ.ಉಮೇಶ ಜಾಧವ, ಬೀದರ್ ಸಂಸದ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಧಾನಸಭೆಯ ಶಾಸಕರಾದ ಪ್ರಿಯಾಂಕ್ ಖರ್ಗೆ, ಖನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಸುಭಾಷ ಆರ್.ಗುತ್ತೇದಾರ್, ಡಾ.ಅವಿನಾಶ್ ಜಾಧವ್ ಹಾಗೂ ವಿಧಾನ ಪರಿಷತ್ ಶಾಸಕರಾದ ಸುನೀಲ್ ವಲ್ಲ್ಯಾಪುರೆ, ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಪಾಟೀಲ, ಶಶೀಲ್ ನಮೋಶಿ, ಡಾ.ಸಾಯಬಣ್ಣ ತಳವಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ.ವಿ.ಟೆಂಗಳಿ, ಕಲಬುರಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಯಾನಂದ ದಾರವಾಡಕರ, ಕಲಬುರಗಿ ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ, ಕರ್ನಾಟಕ ನವೀಕರಿಸÀಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಅಫಜಲಪೂರ ತಾಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮುಣಿ ಜಮಾದಾರ ಚೌಡಾಪೂರ, ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಕರ್ಜಗಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಎಂ.ಸತೀಶ್ ಕುಮಾರ್, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಮನೀಷ ಖರ್ಬಿಕರ್, ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ್ ಅತುಲ್ ಹಾಗೂ ಕಲಬುರಗಿ ಜೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ರಾಹುಲ ಪಾಂಡ್ವೆ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕಲಾವಿದರಿಂದ ಸುಗಮ ಸಂಗೀತ, ವಚನ ಗಾಯನ, ಗಜಲ್ ಗಾಯನ, ತತ್ವಪದ, ಜಾನಪದ ಗಾಯನ, ದಾಸವಾಣಿ, ಕೊಳಲು ವಾದನ, ವಾಯಲಿನ್, ಸೋಬಾನೆ ಪದಗಳು, ಸಿತಾರ್ ವಾದನ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ತಬಲಾ ಸೋಲೋ, ಸುಗಮ ಸಂಗೀತ, ಜಾನಪದ ಗೀತೆ, ಕಥಾ ಕೀರ್ತನೆ ಕಾರ್ಯಕ್ರಮಗಳು ಜರುಗಲಿದೆ.
ಇದಲ್ಲದೇ ಸುಗ್ಗಿ ಹುಗ್ಗಿ ಕಾರ್ಯಕ್ರಮದಲ್ಲಿ ಪೂಜಾ ಕುಣಿತ, ಮಹಿಳಾ ವೀರಗಾಸೆ, ನಂದಿ ಧ್ವಜ, ಲಂಬಾಣಿ ನೃತ್ಯ, ತಮಟೆ ವಾದನ, ಪುರವಂತಿಕೆ, ಡೊಳ್ಳು ಕುಣಿತ, ತಮಟೆ ವಾದನ, ಕರಡಿ ಮಜಲು ಹಾಗೂ ಚಿಟ್ಟಹಲಗೆ ಮೇಳ ಜಾನಪದ ಕಲಾ ತಂಡಗಳು ಭಾಗವಹಿಸಲಿದೆ.