ವಿವೇಕಾನಂದರ ಚಿಂತನೆ ಯುವ ಜನಾಂಗಕ್ಕೆ ಸ್ಪೂರ್ತಿ: ಹರ್ಷಲ್

0
18

ಸುರಪುರ: ರಾಷ್ಟ್ರದ ಶ್ರೇಷ್ಠ ಯುವ ಸಂತ ಸ್ವಾಮಿ ವಿವೇಕಾನಂದರ ತತ್ವ, ಚಿಂತನೆ, ವಿಚಾರಗಳು ಯುವ ಜನಾಂಗಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ಕಲಬುರಗಿ ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ಶ್ರೀ. ಹರ್ಷಲ್ ಸಿದ್ದಾರ್ಥ ತಲಸ್ಕರ ಹೇಳಿದರು.

ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕ ಸಂಘ ಕನ್ನೆಳ್ಳಿ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಯುವದಿನ ಹಾಗು ಸ್ವಾಮಿ ವಿವೇಕಾನಂದರ ೧೫೮ನೇ ಯ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಯಾಗೋ ಸಮ್ಮೇಳನದ ಮೂಲಕ ವಿಶ್ವದ ಗಮನ ಸೇಳೆದ ಸ್ವಾಮಿ ವಿವೇಕಾನಂದರು ಈ ರಾಷ್ಟ್ರದ ಯುವ ಜನಾಂಗಕ್ಕಾಗಿ ಅನೇಕ ವಿಚಾರಗಳನ್ನು, ಚಿಂತನೆಗಳನ್ನು, ಆಲೋಚನೆಗಳನ್ನು ತಿಳಿಸಿದ್ದಾರೆ. ಅವರ ದೇಶ ಪ್ರೇಮ, ಯುವ ಜನಾಂಗದ ಮೇಲಿನ ಅಭಿಮಾನ ರಾಷ್ಟ್ರಭಕ್ತಿ ಆದರ್ಶಪ್ರಾಯವಾಗಿತ್ತು ಇಂದಿನ ಯುವಜನಾಂಗಕ್ಕೆ ವಿವೇಕಾನಂದರ ವಿಚಾರಗಳು ಅತ್ಯಂತ ಅವಶ್ಯಕವಾಗಿವೆ ಎಂದು ಹೇಳಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸನೀಡಿದ ಸಾಹಿತಿ ಶರಣಗೌಡ ಪಾಟೀಲ್ ಜೈನಾಪುರ ಮಾತನಾಡಿ, ಬಾಲ್ಯದಲ್ಲಿದ್ದ ನರೇಂದ್ರ ರಾಮಕೃಷ್ಣ ಪರಮಹಂಸರ ಪ್ರೇರಣೆಯಿಂದ ಸ್ವಾಮಿ ವಿವೇಕಾನಂದ ಆದರು, ಅಮೇರಿಕಾದ ಚಿಕ್ಯಾಗೋ ಸಮ್ಮೇಳನದ ಮೂಲಕ ವಿಶ್ವದ ಗಮನಸೇಳೆದು ಭಾರತದ ಭವ್ಯತೆ, ಪರಂಪರೆ, ಜಾಗತಿಕಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬಸವೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವಿರೇಶ ಹಳಿಮನಿ, ಶಾಂತು ನಾಯಕ, ಕರ್ನಾಟಕ ನವನಿರ್ಮಾಣ ವೇದಿಕೆಯ ಅಧ್ಯಕ್ಷ ಶಿವರಾಜ ಕಲಿಕೇರಿ, ನೇಹರು ಯುವಕೇಂದ್ರದ ಅಬ್ದುಲ್ ಶಫಿ ಅಹ್ಮದ ವೇದಿಕೆ ಮೇಲಿದ್ದರು, ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಶ್ರೀಕಾಂತ ರತ್ತಾಳ ಪ್ರಾರ್ಥಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ಮಲ್ಲಿಕಾರ್ಜುನ ಸುಭೇದಾರ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here