ಶಹಾಬಾದ: ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇದೇ ಜನವರಿ ೧೫ರಂದು ೧೦:೦೦ ಗಂಟೆಗೆ ನಗರದ ಗಂಗಮ್ಮ.ಎಸ್. ಮರಗೋಳ ಕನ್ಯಾ ಪ್ರೌಢ ಶಾಲೆಯಲ್ಲಿ ಸಭೆ ಏರ್ಪಡಿಸಲಾಗಿದ್ದು, ನಾಲ್ಕು ಗ್ರಾಪಂಯ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಎಂದು ತಹಸೀಲ್ದಾರ್ ಸುರೇಶ್ ವರ್ಮ ತಿಳಿಸಿದ್ದಾರೆ.
ತಾಲೂಕಿನ ಭಂಕೂರ, ಮರತೂರ, ಹೊನಗುಂಟಾ, ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತರಾದ ನೂತನ ಗ್ರಾಮ ಪಂಚಾಯಿತಿ ಸದಸ್ಯರು ಚುನಾವಣಾ ಅಧಿಕಾರಿಗಳು ನೀಡಿದ ಪ್ರಮಾಣಪತ್ರಗಳೊಂದಿಗೆ ನಿಗದಿಪಡಿಸಿದ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಆಯಾ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಕೋವಿಡ್-೧೯ ಸುರಕ್ಷತಾ ಕ್ರಮಗಳೊಂದಿಗೆ ಕುಳಿತುಕೊಳ್ಳಬೇಕು.ಅಲ್ಲದೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆಯಲ್ಲಿ ಹಾಜರಿರಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…