ಬಿಸಿ ಬಿಸಿ ಸುದ್ದಿ

ಸಾರ್ವಜನಿಕರು ನಿರ್ಭಯವಾಗಿ ಮುಂದೆ ಬಂದು ಭ್ರಷ್ಟಾಚಾರ ನಿರ್ಮೂಲನೆಗೆ ಸಹಕರಿಸಿ-ಮ.ಇಸ್ಮಾಯಿಲ್

ಶಹಾಬಾದ: ಸರಕಾರಿ ನೌಕರರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡು ಬಂದರೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಲು ಸಾರ್ವಜನಿಕರು ಮುಂದಾಗಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಮಹ್ಮದ್ ಇಸ್ಮಾಯಿಲ್ ತಿಳಿಸಿದರು.
ಅವರು ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಸರಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡಲು ಹಣ ಕೇಳಿದರೆ, ಕೆಲಸ ಮಾಡಿಕೊಡಲು ವಿಳಂಬ ಮಾಡಿದರೆ, ಸಾರ್ವಜನಿಕ ಕೆಲಸಕ್ಕೆ ಲಂಚದ ಹಣಕ್ಕಾಗಿ ಒತ್ತಾಯಿಸುವುದು, ಲಂಚ ರೂಪದಲ್ಲಿ ಬೇರೆ ಪ್ರತಿಫಲ ಪಡೆಯುವುದು, ಅಥವಾ ಸರಕಾರಿ ಸ್ವತ್ತನ್ನು ಕಾನೂನು ಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟರೆ ಎಸಿಬಿಗೆ ದೂರು ನೀಡಬಹುದು. ಅಲ್ಲದೇ ಕೆಲಸವನ್ನು ಅನಗತ್ಯವಾಗಿ ವಿಳಂಬ ಮಾಡುವುದು, ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಅವ್ಯವಹಾರದಲ್ಲಿ, ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿದ್ದರೇ, ಅಕ್ರಮ ಆಸ್ತಿ ಹೊಂದಿದ್ದರೇ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ೧೯೮೮ ರ ಅನ್ವಯ ಅಪರಾಧವಾಗುತ್ತದೆ. ಇಂತಹ ವ್ಯಕ್ತಿಗಳು ಇದ್ದರೇ ಅವರ ವಿರುದ್ಧ ದೂರು ನೀಡಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಅವರಿಗೆ ಸೂಕ್ತ ರಕ್ಷಣೆ ಒದಗಿಸುತ್ತೆವೆ. ಸಾರ್ವಜನಿಕರು ನಿರ್ಭಯವಾಗಿ ಮುಂದೆ ಬಂದು ಭ್ರಷ್ಟಾಚಾರ ನಿರ್ಮೂಲನೆಗೆ ಸಹಕರಿಸಬೇಕು ಎಂದು ಕೋರಿದರು.
ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಂಬAಧಿಸಿದAತೆ ಮಾಹಿತಿ ಇದ್ದರೇ ಅಥವಾ ದೂರು ದಾಖಲಿಸಲು ಎಸಿಬಿ ಡಿವೈಎಸ್‌ಪಿ-೯೪೮೦೮೦೬೨೪೦, ಪಿಐ-೯೪೮೦೮೮೬೩೦೯, ೯೪೮೦೮೦೬೩೧೦, ಸ್ಥಿರ ದೂರವಾಣಿ-೦೮೪೭೨-೨೭೦೬೪೧ ದೂರು ನೀಡಿ ಅಥವಾ ಮಾಹಿತಿ ನೀಡಿ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಸಿಬ್ಬಂದಿಗಳಾದ ಶರಣಬಸವ, ಮಹೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಕರವೇ ತಾಲೂಕಾ ಸಂಚಾಲಕ ವಿಶ್ವರಾಜ ಫಿರೋಜಬಾದ, ಶಿವಕುಮಾರ ಕಾರೊಳ್ಳಿ, ಆಶಪ್ಪ ಭಜಂತ್ರಿ, ಭೂತಾಳಿ ಪೂಜಾರಿ,ರಷೀದ್ ಪಟೇಲ್, ಶಿವಕುಮಾರ ಗೋಳಾ(ಕೆ) ಇತರರು ಇದ್ದರು.

 

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago