ಕಲಬುರಗಿ: ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ಹಂಚಿಕೆ ಸಮಯದಲ್ಲಿ ಬದಲಾವಣೆ ಮಾಡಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಚಿಂಚೋಳಿ ತಾಲೂಕಿನ ಗ್ರಾ.ಪಂ. ಗಳಿಗೆ ಮೀಸಲಾತಿ ನಿಗದಿಪಡಿಸಲು ಜನವರಿ 16 ರಂದು ಬೆಳಿಗ್ಗೆ 10 ಗಂಟೆಗೆ ಚಿಂಚೋಳಿಯ ಸಿ.ಬಿ. ಪಾಟೀಲ್ ಪಿ.ಯು.ಕಾಲೇಜಿನಲ್ಲಿ ನಿಗದಿಪಡಿಸಲಾಗಿತ್ತು. ಅಂದು ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಆಯ್ಕೆಪ್ರಕ್ರಿಯೆ ನಡೆಸಲಾಗುತ್ತಿದೆ. ಅದೇ ರೀತಿ ಕಾಳಗಿ ತಾಲೂಕಿನ ಗ್ರಾ.ಪಂ.ಗಳಿಗೆ ಜನವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಕಾಳಗಿಯ ಕಾಳೇಶ್ವರ ದೇವಸ್ಥಾನದ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದನ್ನು, ಸಾಯಂಕಾಲ 4 ಗಂಟೆಗೆ ನಿಗದಿಪಡಿಸಿದೆ.
ಸಂಬಂಧಪಟ್ಟ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕಿನ ತಹಶೀಲ್ದಾರರ ಸಹಯೋಗದೊಂದಿಗೆ ಯಾವುದೇ ಲೋಪದೋಷವಾಗದಂತೆ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…