ಕಲಬುರಗಿ: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶನದಂತೆ ಕಲಬುರಗಿ ಜಿಲ್ಲೆಯಲ್ಲಿ ಇದೇ ಜನವರಿ 16 ರಂದು ಜಿಲ್ಲೆಯ ಒಟ್ಟು 8 ಆರೋಗ್ಯ ಕೇಂದ್ರಗಳಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಕರೋನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಗುಲಬರ್ಗಾ ವೈದ್ಯಕೀಯ ಮಹಾವಿದ್ಯಾಲಯ ಗುಲಬರ್ಗಾ, ಅಫಜಲಪೂರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಆಳಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಚಿಂಚೋಳಿಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಚಿತ್ತಾಪೂರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಸೇಡಂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಅಫಜಲಪೂರ ತಾಲೂಕಿನ ಗೊಬ್ಬುರ ತಾ:ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂದು ಬೆಳಿಗ್ಗೆ 11 ರಿಂದ ಸಾಯಂಕಾಲ 5 ಗಂಟೆಯವರೆಗೆ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರತಿ ಲಸಿಕಾ ಕೇಂದ್ರಗಳಲ್ಲಿ ಕನಿಷ್ಠ 100 ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುವುದು. ನಂತರ ಹಂತ ಹಂತವಾಗಿ ಲಸಿಕೆಯನ್ನು ನೀಡಲಾಗುವುದು. ಕೋವಿಡ್-19 ಲಸಿಕಾ ನಿರ್ವಹಣಾ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಸಂಭವಿಸಿದ್ದಲ್ಲಿ ನಿರ್ವಹಣೆಗಾಗಿ (ಏಇಎಫ್‍ಐ ) ನಿರ್ವಹಣಾ ಘಟಕಗಳನ್ನು ರಚಿಸಲಾಗಿದೆ.
ಜನವರಿ 16 ರಂದು ಬೆಳಗ್ಗೆ 10.30 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಈ ಕರೋನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನಾ ನೀಡಲಿದ್ದಾರೆ. ನಂತರ ದೇಶಾದ್ಯಂತ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕಾ ನೀಡುವ ಕಾರ್ಯಕ್ರಮವು ಬೆಳಿಗ್ಗೆ 11 ರಿಂದ ಸಾಯಂಕಾಲ 5 ಗಂಟೆಯವರೆಗೆ ಜರುಗಲಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…