ಕಲಬುರಗಿ: ನಗರದ ವಾರ್ಡ್ ನಂ. 1 ರ ವ್ಯಾಪ್ತಿಯಲ್ಲಿ ಬರುವ ರಾಮನಗರ ಬಡಾವಣೆಯಲ್ಲಿನ ಕೆಟ್ಟು ಹೋಗಿರುವ ಬೋರವೆಲ್ ದುರಸ್ತಿಗೊಳಿಸಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಕಾರ್ಯಕರ್ತರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
ಪಾಲಿಕೆ ಆಯುಕ್ತರಿಗೆ ಮನವಿ ಮಾಡಿರುವ ಅವರು ಈ ಬಡಾವಣೆಯಲ್ಲಿ ಕೆಟ್ಟು ಹೋಗಿರುವ ಬೋರವೆಲ್ ಯನ್ನು ದುರಸ್ಥಿಗೊಳಿಸಿ ಅನೂಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ರಾಮನಗರ ಬಡಾವಣೆಯ ಜನರಿಗೆ ತೊಂದರೆ ಅನುಭವಿಸುವಂತಾಗಿದೆ, ವಾರ್ಡಿನ ಜನತೆ ಮಹಾನಗರ ಪಾಲಿಕೆಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿ ಪತ್ರದಲ್ಲಿ ದೂರಿದರು.
ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಜನತೆಯ ಪರಿಸ್ಥಿತಿಯನ್ನು ಸಾರ್ವಜನಿಕರನ್ನು ನೀರಿನ ದಾಹಕಾರದಿಂದ ರಕ್ಷಿಸಬೇಕು ಎಂದು ಮನವಿ ಮಾಡಿದರು. ಒಂದು ವೇಳೆ ವಾರದೊಳಗೆ ಸಮಸ್ಯೆ ಬಗೆ ಹರಿಸದೆ ಹೋದಲ್ಲಿ ಬಡಾವಣೆಯ ಸಾರ್ವಜನಿಕರೊಂದಿಗೆ ಬೀದಿಗಿಳಿದು ಉಗ್ರರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ , ಶರಣು ಹೊಸಮನಿ, ರಮೇಶ ಪೂಜಾರಿ, ರವಿ ಬೆಲ್ಲದ, ಹಾಗೂ ಬಡಾವಣೆಯ ನಿವಾಸಿಗಳು ಇದ್ದರು