ಬಿಸಿ ಬಿಸಿ ಸುದ್ದಿ

ಕೊರೋನಾ ವ್ಯಾಕ್ಸಿನ್ ಬಗ್ಗೆ ಭಯಬೇಡ: ಸಂಸದ ಡಾ.ಉಮೇಶ್ ಜಾಧವ್

ಕಲಬುರಗಿ: ನೂರಕ್ಕೆ ನೂರರಷ್ಟು ಕೊರೊನಾ ಲಸಿಕೆ ಯಶಸ್ವಿಯಾಗುತ್ತದೆ ಎಂದು ಕಲಬುರಗಿ ಸಂಸದ ಡಾ.ಉಮೇಶ ಜಾಧವ ಅವರು ವಿಶ್ವಾಸದಿಂದ ನುಡಿದರು.

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲಸಿಕೆ ತಯಾರಿಸುವಲ್ಲಿ ಶ್ರಮಿಸಿದ ಎಲ್ಲ ವಿಜ್ಞಾನಿಗಳು, ವೈದ್ಯರು ಹಾಗೂ ಲಸಿಕೆ ಶೀಘ್ರವೇ ಲಭ್ಯವಾಗುವಂತೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು.

ಕೊರೋನಾ ಲಸಿಕೆ ಯಾವಾಗ ಬರುತ್ತೆ ಎಂದು ಜಿಲ್ಲೆಯ ಜನರೂ ಕಾಯುತ್ತಿದ್ದರು. ಇದೀಗ ಲಸಿಕೆ ಬಂದಿರುವುದು ಜಿಲ್ಲೆಗೆ ಸಡಗರ ತಂದಿದೆ ಎಂದರು. ಈ ಲಸಿಕೆ ಮೊದಲು ವೈದ್ಯ ಸಿಬ್ಬಂದಿಗೆ ನೀಡಿ, ಬಳಿಕ ಕೆಲ ದಿನಗಳ ನಂತರದಲ್ಲಿ ಎಲ್ಲರಿಗೂ ಲಭ್ಯವಾಗಲಿದೆ ಎಂದು ಭರವಸೆ ನೀಡಿದರು. ಲಸಿಕೆ ಪಡೆಯುವುದರಿಂದ ಸಣ್ಣ-ಪುಟ್ಟ ಅಡ್ಡಪರಿಣಾಮಗಳು ಆಗಬಹುದು. ಇದರಿಂದ ಯಾರೂ ಭಯಪಡಬೇಕಾಗಿಲ್ಲ. ಲಸಿಕೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಅಲ್ಲದೇ, ಈ ವರೆಗೂ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಿದ ಮಾಧ್ಯಮ ಸಿಬ್ಬಂದಿ ಬಗ್ಗೆಯೂ ಈ ಸಂದರ್ಭದಲ್ಲಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆ.ಕೆ.ಆರ್.ಡಿ.ಬಿ.ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ಸಿ. ರೇವೂರ, ಶಾಸಕರಾದ ಬಸವರಾಜ್ ಮತ್ತಿಮೂಡ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago