ಕಲಬುರಗಿ: ತಾನು ರೈತಪರ ಎಂದು ಹೇಳುತ್ತಲೇ ಪ್ರಧಾನಿ ನರೇಂದ್ರ ಮೋದಿ ರೈತರ ಮರಣ ಶಾಸನ ಬರೆದಿದ್ದಾರೆ. ರೈತರು ಆರ್‌ಕೆಎಸ್ ನೇತೃತ್ವದಲ್ಲಿ ಆ ಶಾಸನಗಳನ್ನು ಬೆಂಕಿಗೆ ಎಸೆದು ಸುಡುತ್ತಿದ್ದಾರೆ ಎಂದು ರೈತ ಕೃಷಿ ಕರ್ಮಿಕ ಸಂಘಟನೆ ರಾಜ್ಯ ಕಾರ್ಯದರ್ಶಿ ಎಚ್.ವಿ.ದಿವಾಕರ್ ಹೇಳಿದರು.
ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಜನವಿರೋಧಿ ಕರಾಳ ಕೃಷಿ ಶಾಸನಗಳ ವಿರುದ್ಧ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್) ವತಿಯಿಂದ ವಾಡಿ ನಗರದಲ್ಲಿ ಉದ್ಘಾಟನೆಗೊಂಡ ರೈತರ ಆಗ್ರಹ ಜೀಪ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ದುರಾಡಳಿತದಿಂದಾಗಿ ದೇಶದ ಅನ್ನದಾತರ ಬದುಕು ಸರ್ವನಾಶವಾಗಿದೆ. ಈಗ ಬಿಜೆಪಿ ತರುತ್ತಿರುವ ಹೊಸ ಮಸೂದೆಗಳು ರೈತರು ಬದುಕುವ ಹಕ್ಕನೇ ಕಸಿದುಕೊಂಡು ನಿರ್ಗತಿಕರನ್ನಾಗಿಸಲು ಹೊರಟಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಬಂಡವಾಳಿಗರ ಲಾಭದ ಕಾರ್ಖಾನೆಯನ್ನಾಗಿ ಪರಿವರ್ತಿಸಲು ಸರಕಾರ ಟೊಂಕಕಟ್ಟಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷಾಂತರ ರೈತರು ಕೃಷಿ ನೀತಿಗಳನ್ನು ವಿರೋಧಿಸಿ ದೇಶದಾದ್ಯಂತ ಹೋರಾಟ ಬೆಳೆಸುತ್ತಿದ್ದಾರೆ. ದೇಹಲಿಗೆ ಮುತ್ತಿಗೆ ಹಾಕಲು ತೆರಳಿದ ಅಸಂಖ್ಯಾತ ರೈತರನ್ನು ಘಾಜಿಯಾಬಾದ್ ಗಡಿಯಲ್ಲೇ ಸರಕಾರ ತಡೆದಿದೆ. ಹೆದ್ದಾರಿಗಳನ್ನು ಧ್ವಂಸ ಮಾಡಿ ರೈತರು ದೆಹಲಿ ಪ್ರವೇಶಿಸದಂತೆ ನೋಡಿಕೊಳ್ಳಲಾಗಿದೆ.
ಪೊಲೀಸ್ ಬಲ ಪ್ರಯೋಗಿಸುವ ಮೂಲಕ ಸರಕಾರ ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ ಹೋರಾಟ ಮುರಿಯಲು ಪ್ರಯತ್ನಿಸಿದೆ. ಥರಗುಟ್ಟುವ ಚಳಿಯಲ್ಲಿ ದೇಶದ ನಾನಾ ರಾಜ್ಯಗಳ ಲಕ್ಷಾಂತರ ರೈತರು ಹೋರಾಟ ಮುಂದುವರೆಸಿದ್ದಾರೆ. ೪೦ ಕ್ಕೂ ಹೆಚ್ಚು ರೈತರು ಈ ಹೋರಾಟದಲ್ಲಿ ಹುತಾತ್ಮರಾಗಿದ್ದಾರೆ. ಎಲ್ಲಾ ಸರಕಾರಗಳು ಕೇವಲ ಕಾರ್ಪೋರೇಟ್ ಬಂಡವಳಗಾರರ ಪರವಾಗಿವೆ ಎಂಬ ಕಟುಸತ್ಯ ಬಹಿರಂಗಗೊಂಡಿದೆ. ಯಾವ ಪಕ್ಷಗಳೂ ಜನಪರವಾಗಿಲ್ಲ ಎಂಬುದು ಮನವರಿಕೆಯಾಗಿದೆ. ರಾಜಿರಹಿತ ಹೋರಾಟದ ಮೂಲಕ ಈ ಜನವಿರೋಧಿ ನೀತಿಗಳನ್ನು ಸೋಲಿಸಬೇಕಿದೆ ಎಂದರು.
ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ಅವರು ಕೆಂಪು ಭಾವುಟ ಪ್ರದರ್ಶಿಸುವ ಮೂಲಕ ರೈತ ಜಾಗೃತಿ ಜೀಪ್ ಜಾಥಾ ಉದ್ಘಾಟಿಸಿದರು. ಆರ್‌ಕೆಎಸ್ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಎಐಡಿವೈಒ ಅಧ್ಯಕ್ಷ ಶರಣು ವಿ.ಕೆ, ಎಐಡಿಎಸ್‌ಒ ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಎಐಯುಟಿಯುಸಿ ಜಿಲ್ಲಾ ಮುಖಂಡ ಶರಣು ಹೇರೂರ, ಭಾಗಣ್ಣ ಬುಕ್ಕಾ, ಮಲ್ಲಣ್ಣ ದಂಡಬಾ, ಮಲ್ಲಿನಾಥ ಹುಂಡೇಕಲ್, ಶಿವುಕುಮಾರ ಆಂದೋಲಾ, ರಾಜು ಒಡೆಯರ, ವಿಠ್ಠಲ ರಾಠೋಡ, ಗೋವಿಂದ ಯಳವಾರ, ದತ್ತಾತ್ರೇಯ ಹುಡೇಕರ್ ಜಥಾದಲ್ಲಿ ಪಾಲ್ಗೊಂಡಿದ್ದರು. ವಾಡಿ, ನಾಲವಾರ, ಇಂಗಳಗಿ, ಕುಂದನೂರ, ಚಾಮನೂರ, ಕೊಲ್ಲೂರ, ಕುಲಕುಂದಾ, ಲಾಡ್ಲಾಪುರ, ಹಳಕರ್ಟಿ, ಅಳ್ಳೊಳ್ಳಿ, ಅಣ್ಣಿಕೇರಾ ಗ್ರಾಮಗಳಲ್ಲಿ ರೈತರ ಸಭೆಗಳನ್ನು ನಡೆಸುವ ಮೂಲಕ ಕೃಷಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ಆರ್‌ಕೆಎಸ್ ಕಾರ್ಯಕರ್ತರು ಹಳ್ಳಿ ರೈತರಿಂದ ಹೋರಾಟಕ್ಕಾಗಿ ದೇಣಿಗೆ ಸಂಗ್ರಹಿಸಿದರು. ರೈತರು ಧನ ಸಹಾಯ ನೀಡಿ ಹೋರಾಟವನ್ನು ಬೆಂಬಲಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…