ಸುರಪುರ: ಇಲ್ಲಿಯ ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವರಾಜ ಜಮದ್ರಖಾನಿ ಅವರನ್ನು ಸಗರನಾಡು ಸೇವಾ ಪ್ರತಿಷ್ಠಾನವತಿಯಿಂದ ಸುರಪುರದ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆಮಾಡಿ ತಮಗೆ ಜವಬ್ದಾರಿವಹಿಸಿದ್ದು ನಮಗೆ ಸಂತಸವಾಗಿದೆ, ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವ ಅನೇಕ ಸಾಹಿತಿಕ ಕಾರ್ಯಕ್ರಮಗಳು ಹಾಗೂ ಅನೇಕ ಪುಸ್ತಕಗಳ ಪ್ರಕಟಣೆ ಈ ಹಿಂದೆ ಸುರಪುರದ ಕನ್ನಡ ಸಾಹಿತ್ಯ ಸಂಘ ಅಧ್ಯಕ್ಷರಾಗಿದ್ದ ರಾಜಾ ಮದನಗೋಪಾಲ ನಾಯಕರ ನೇತೃತ್ವದಲ್ಲಿ ನಡೆಸಿಕೊಂಡು ಬಂದಿದೆ, ತಾವು ಕೂಡ ಸಂಘದ ಆರಂಭದಿಂದ ಕಾರ್ಯದರ್ಶಿಗಳಾಗಿ ಕನ್ನಡ ಸೇವೆ ಮಾಡುತ್ತಾ ಬಂದಿದ್ದು ಇಗಾಗಲೇ ಈ ಹಿಂದೆ ಸುರಪುರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ತಾವು ಅನುಪಮವಾದ ಸೇವೆ ಸಲ್ಲಿಸಿದ್ದಿರಿ ಪ್ರಸ್ತುತ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾಗಿ ನೇಮಕಗೊಂಡಿರುವುದು ನಮಗೆ ಹೆಚ್ಚಿನ ಸಂತಸತಂದಿದೆ ಎಂದು ಹೇಳಿದರು.
ಸನ್ಮಾನ ಸ್ವಿಕರಿಸಿ ಮಾತನಾಡಿದ ಬಸವರಾಜ ಜಮದ್ರಖಾನಿರವರು ನಿಮ್ಮೆಲ್ಲರ ಸಹಕಾರದಿಂದ ಸಾಹಿತಿಕ ಸೇವೆ ಮಾಡೊಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ವೇದಿಕೆಯ ವಿಭಾಗಿಯ ಅಧ್ಯಕ್ಷ ಶಿವರಾಜ ಕಲಿಕೇರಿ, ಪ್ರಮುಖರಾದ ರಾಮು ಸೂಗುರು, ಮುದಕಪ್ಪ ಚಂದ್ಲಾಪುರ, ಬಾಪುಗೌಡ ಹೆಗ್ಗಣದೊಡ್ಡಿ, ಪರಶುರಾಮ ಕಟ್ಟಿಮನಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…