ಶಹಾಪುರ:ಹೈದರಾಬಾದ್ ಕರ್ನಾಟಕ 371(j) ಮೀಸಲಾತಿ ಕಲ್ಪಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್ ಅವರಿಗೆ ಡಾ: ಶರಣು ಗದ್ದುಗೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸರಕಾರದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಕರೆದಿರುವ ೮೦೦ ಎಂಜಿನಿಯರ್ ಹುದ್ದೆಗಳಲ್ಲಿ ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲಾತಿ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಯಾದಗಿರಿಯ ಸುಭಾಸ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಇವರಿಗೂ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದಿಂದ ಯಾವುದೇ ಹುದ್ದೆಗಳು ಕರೆದರೂ ಕೂಡ ಹೈದರಾಬಾದ್ ಕರ್ನಾಟಕಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಸರಕಾರದ ಆದೇಶ ಇದ್ದರೂ ಕೂಡ ನಿಯಮಗಳನ್ನು ಗಾಳಿಗೆ ತೂರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇದರಿಂದ ನಮ್ಮ ಭಾಗದ ಇಂಜಿನಿಯರ್ ಪದವೀಧರ ವಿದ್ಯಾರ್ಥಿಗಳಿಗೆ ತುಂಬಾ ಅನ್ಯಾಯವಸಗುತ್ತದೆ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ರೈತ ಪರ ಸಂಘಟನೆಗಳ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ ನೀಲಮ್ಮ ಪಾಟೀಲ್ ಹಾಗೂ ಇತರರು.