ಕಲಬುರಗಿ: ಹೆಚ್ಚು ವಿದ್ಯಾಭ್ಯಾಸ ಮಾಡದಿದ್ದರು ಚರುಕು ಬುದ್ಧಿ ಆದರ್ಶ ಕಾಯಕ ಜೀವಿ, ಶ್ರದ್ಧೆಯಿಂದ ಹಿಡಿದ ಕೆಲಸವನ್ನು ಮಾಡಿ ಮುಗಿಸುವ ಛಲಗಾರ ವ್ಯಕ್ತಿ ಡಾ. ಗಳಂಗಳಪ್ಪ ಪಾಟೀಲ ಅವರು ಆಗಿದ್ದರೆಂದು ಕೆಪಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಾರುತಿರಾವ ಡಿ. ಮಾಲೆ ಅವರು ಬಣ್ಣಿಸಿದ್ದಾರೆ.
ನಗರದ ಚಂದ್ರಕಾಂತ ಪಾಟೀಲ ಸ್ಮಾರಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಡಾ. ಗಳಂಗಳಪ್ಪ ಪಾಟೀಲರವರ ೧೦೧ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಡಾ. ಗಳಂಗಳಪ್ಪ ಪಾಟೀಲ ರವರ ಆದರ್ಶಗಳು ಯುವ ಜನಾಂಗಕ್ಕೆ ಮಾದರಿ ಯಾಗಿದೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡು ಗಣ್ಯರಿಂದ ಜ್ಯೋತಿ ಬೆಳಗಿಸುವರೊಂದಿಗೆ ಅತಿಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ.ಬಿ.ಜಿ.ಪಾಟೀಲರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪ್ರೋ. ವಿ. ಜಿ. ಅಂದಾನಿ, ಕೆ. ಎಸ್. ಮಾಲಿ ಪಾಟೀಲ, ಡಾ. ಸ್ವರೂಪ್ ರಂಜನ್, ಡಾ. ಕೈಲಾಸ. ಬಿ. ಪಾಟೀಲ್, ಹಾಗೂ ಶಾಲೆಯ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಕಾಲೇಜಿನ ಪ್ರಾಚಾರ್ಯರಾದ ಮಂಜುನಾಥ ಜಿ.ಟಿ.ಎಸ್. ರವರ ವಂದನಾರ್ಪಣೆಯೊಂದಿಗೆ ಮುಕ್ತಾಯಗೊಂಡಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…