ಬೆಂಗಳೂರಿನಲ್ಲಿಂದು ವೇಮನ ಜಯಂತಿ : ಉಪನ್ಯಾಸಕ್ಕೆ ರೆಡ್ಡಿಗೆ ಆಹ್ವಾನ

0
243

ಕಲಬುರಗಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಜ.೧೯ ರಂದು ಸಂಜೆ ೫ ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.

ಹರಿಹರ ರೆಡ್ಡಿ ಗುರುಪೀಠದ ಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಉಪಸ್ಥಿತರಿರುವರು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ ಲಕ್ಷ್ಮಣ ಸವದಿ, ಸಚಿವರಾದ ಆರ್.ಅಶೋಕ, ಎಸ್.ಸುರೇಶಕುಮಾರ, ವಿ.ಸೋಮಣ್ಣ, ಸೋಮಶೇಖರ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಸ್.ಆರ್.ವಿಶ್ವನಾಥ ಮುಖ್ಯ ಅತಿಥಿಗಳಾಗಿರುವರು. ಚಿಕ್ಕಪೇಟೆ ಶಾಸಕ ಉದಯ್ ಬಿ.ಗರುಡಾಚಾರ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ರಾಮಲಿಂಗಾರೆಡ್ಡಿ ಸೇರಿದಂತೆ ಸಂಸದರು,ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸುವರು. ಬಿಎಂಟಿಸಿ ಅಧ್ಯಕ್ಷ ನಂದೀಶರೆಡ್ಡಿ, ಹಾಗೂ ಕರ್ನಾಟಕ ರೆಡ್ಡಿ ಜನಸಂಘ ಅಧ್ಯಕ್ಷ ಎಸ್.ಜಯರಾಮರೆಡ್ಡಿ ವಿಶೇಷ ಆಹ್ವಾನಿತರಾಗಿರುವರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಹಾಯೋಗಿ ವೇಮನ ಅವರ ಕುರಿತು ವಿಶೇಷ ಉಪನ್ಯಾಸ ನೀಡಲು ಕಲಬುರಗಿಯ ಲೇಖಕ, ಕಸಾಪ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರನ್ನು ಆಹ್ವಾನಿಸಲಾಗಿದೆ. ಇದಕ್ಕೂ ಮುನ್ನ ವಚನ ಗಾಯನ ನಡೆಯಲಿದೆ ಮತ್ತು ಜಾನಪದ ಕಲಾತಂಡಗಳು ಭಾಗವಹಿಸಲಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here