ಬಿಸಿ ಬಿಸಿ ಸುದ್ದಿ

ಸಿದ್ಧರಾಮೇಶ್ವರ ಜಯಂತಿ ಆಚರಿಸದೇ ನಿರ್ಲಕ್ಷ್ಯತನ ತೋರಿದ ಬಿಜೆಪಿ ಅಧ್ಯಕ್ಷ ರಾಜೀನಾಮೆಗೆ ಒತ್ತಾಯ

ಶಹಾಬಾದ:ನಗರದ ಬಿಜೆಪಿ ಕಚೇರಿಯಲ್ಲಿ ಭೋವಿ ಸಮಾಜದ ಶರಣ ಸಿದ್ಧರಾಮೇಶ್ವರ ಜಯಂತೋತ್ಸವವನ್ನು ಆಚರಿಸದೇ ನಿರ್ಲಕ್ಷ್ಯತನ ತೋರಿದ ನಗರದ ಬಿಜೆಪಿ ಮಂಡಲ ಅಧ್ಯಕ್ಷ ಸಮಾಜಕ್ಕೆ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು. ಇಲ್ಲದಿದ್ದರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭೋವಿ ಸಮಾಜದ ಅಧ್ಯಕ್ಷ ಭೀಮರಾವ ಸಾಳುಂಕೆ ಆಗ್ರಹಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಈ ಹಿಂದೆ ೨೦೦೮-೦೯ನೇ ಸಾಳಿನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರೇ ಸಿದ್ಧರಾಮೇಶ್ವರ ಜಯಂತಿ ಆಚರಿಸಲು ಆದೇಶ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ನಮ್ಮ ಬಿಜೆಪಿ ಪಕ್ಷದ ಕಚೇರಿಯಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಆದರೆ ಇದೇ ಮೊದಲ ಬಾರಿ ನಗರದ ಬಿಜೆಪಿ ಕಛೇರಿಯಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಿಸದೇ ನಿರ್ಲಕ್ಷ್ಯ ತೋರಿದ್ದಾರೆ.ಅಲ್ಲದೇ ಗಮನಕ್ಕೂ ಬಂದರೂ ಜಯಂತಿ ಮಾಡದೇ ಕಡೆಗಣಿಸಲಾಗಿದೆ.ಇದೇನಾ ಶಿಸ್ತಿನ ಪಕ್ಷ ಎನ್ನುವುದು. ಇಲ್ಲಿ ಶಿಸ್ತು ಮಾಯವಾಗಿದೆ.ಈ ಘಟನೆಯಿಂದ ಭೋವಿ ಸಮಾಜದ ಬಾಂಧವರಿಗೆ ಎಲ್ಲಿಲ್ಲದ ನೋವುಂಟಾಗಿದೆ.ಅಲ್ಲದೇ ಈ ರೀತಿ ಎಂದಿಗೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ನಗರದ ಬಿಜೆಪಿಯಲ್ಲಿ ಭೋವಿ ಸಮಾಜದ ಸುಮಾರು ೯೦% ಜನರು ಪಕ್ಷದ ಸಂಘಟನೆಯಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ.ಆದರೆ ನಮ್ಮ ಸಮಾಜದ ಗುರು ಶರಣ ಸಿದ್ಧರಾಮೇಶ್ವರರ ಜಯಂತಿ ಮಾಡದಿರುವುದಕ್ಕೆ ಸಮಾಜಕ್ಕೆ ಕ್ಷಮೆ ಕೋರಬೇಕು.ಇಲ್ಲವಾದಲ್ಲಿ ನೈತಿಕ ಹೊಣೆ ಹೊತ್ತು ನಗರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆಗ್ರಹಿಸಿದಲ್ಲದೇ, ಈ ಕುರಿತು ಶಾಸಕರು, ಜಿಲ್ಲಾಧ್ಯಕ್ಷರು ಸೂಕ್ತ ಕ್ರಮಕೈಗೊಳ್ಳಬೇಕು.ಇಲ್ಲದಿದ್ದರೇ ನಗರದ ಭೋವಿ ಸಮಾಜದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಕಾರಣಕ್ಕೂ ಪಕ್ಷದ ಕಚೇರಿಯಲ್ಲಿ ಕಾಲಿಡುವುದಿಲ್ಲ. ಪಕ್ಷದ ಕಾರ್ಯಕ್ರಮಗಳಲ್ಲಿ, ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ. ಯಾವುದೇ ಕ್ರಮಕೈಗೊಳ್ಳದಿದ್ದಲ್ಲಿ ಮುಂದೆ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ನಗರಸಭೆ ಸದಸ್ಯೆ ಪಾರ್ವತಿ ಪವಾರ ಮಾತನಾಡಿ, ಭೋವಿ ಸಮಾಜದ ಬಗ್ಗೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ.ಅಲ್ಲದೇ ಪಕ್ಷದ ನಗರಸಭೆ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ.ಆದ್ದರಿಂದ ಕೂಡಲೇಬಿಜೆಪಿ ಮಂಡಲ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಭೋವಿ ಸಮಾಜದ ಉಪಾಧ್ಯಕ್ಷ ಅನೀಲ ಭೋರಗಾಂವಕರ್, ಪ್ರಧಾನ ಕಾರ್ಯದರ್ಶಿ ಸಂಜಯ ವಿಠಕರ್,ಅಂಬಣ್ಣ ಕುನ್ನೂರಕರ್, ಹಣಮಂತ ಕೇತ್ರೆ, ಮಹಾದೇವ ಗೋಡ್ಕೆ ಇತರರು ಇದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago