ಕಲಬುರಗಿ: ನದಾಫ್/ ಪಿಂಜಾರ್ ಅಭಿವೃದ್ಧಿ ನಿಗಮ ಮಂಡಳಿ ರಚಿಸುವಂತೆ ಆಗ್ರಹಿಸಿ ನಾಳೆ ಒಂದು ದಿನದ ಸಾಂಕೇತಿಕ ಧರಣಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮೌಲಾಲಿ ಎಂ. ನದಾಫ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನದಾಫ್, ಪಿಂಜಾರ್ ಸಮಾಜವು 38 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿದ್ದು, ಈ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ, ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕವಾಗಿ ನಿಗಮ ಮಂಡಳಿ ರಚಿಸುವುದು ಅಗತ್ಯವಾಗಿದೆ.
ಈ ಕುರಿತು ಹಲವು ಬಾರಿ ಸಮುದಾಯಕ್ಕೆ ನಿಗಮ ಮಂಡಳಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ, ಹೀಗಾಗಿ ರಾಜ್ಯಾದ್ಯಂತ ಒಂದು ದಿನದ ಸಾಂಕೇತಿಕವಾಗಿ ಧರಣಿ ಕೈಗೊಂಡು ಪ್ರತಿಭಟಿಸಿ ಸರ್ಕಾರಕ್ಕೆ ಎಚ್ಚರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.