ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ರಾಜ್ಯದಲ್ಲಿನ ವಿದ್ಯಾರ್ಥಿಗಳ ಹಾಗು ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಕೂಡಲೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು,ಕೊರೊನಾ ಹಾವಳಿಯಿಂದ ರಾಜ್ಯದಲ್ಲಿನ ಬಡ ಕುಟುಂಬಗಳ ವಿದ್ಯಾರ್ಥಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ,ಆದ್ದರಿಂದ ಕೂಡಲೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ.ಅಲ್ಲದೆ ಈಗಾಗಲೆ ಶಾಲಾ ಕಾಲೇಜುಗಳು ಆರಂಭಗೊಂಡಿವೆ ಆದರೆ ಎಲ್ಲಾ ಹಾಸ್ಟೆಲ್‌ಗಳು ಇನ್ನೂ ಆರಂಭಗೊಂಡಿಲ್ಲ,ಎಲ್ಲಾ ಹಾಸ್ಟೆಲ್‌ಗಳನ್ನು ಆರಂಭಿಸಬೇಕು.

ಗ್ರಾಮೀಣ ಭಾಗಕ್ಕೆ ಬಸ್‌ಗಳ ಓಡಾಟ ಆರಂಭಿಸಬೇಕು,ಬಸ್ ಇಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರಲು ತೀವ್ರ ತೊಂದರೆಯಾಗಿದೆ.ಇನ್ನು ಅನೇಕ ಕಾಲೇಜುಗಳಲ್ಲಿ ಕೆಲವು ವಿಷಯಗಳಿಗೆ ಉಪನ್ಯಾಸಕರಿಲ್ಲ,ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸಬೇಕು ಹಾಗು ರಾಜ್ಯದಲ್ಲಿನ ಎಲ್ಲಾ ಅತಿಥಿ ಉಪನ್ಯಾಸಕರಿಗೆ ವರ್ಷದ ಎಲ್ಲಾ ತಿಂಗಳುಗಳು ವೇತನ ನೀಡಬೇಕು ಹಾಗು ಅತಿಥಿ ಉಪನ್ಯಾಸಕರಿಗೆ ಕನಿಷ್ಠ ೩೫ ಸಾವಿರ ರೂಪಾಯಿ ವೇತನ ನೀಡಬೇಕು ಮತ್ತು ಸೇವಾ ಭದ್ರತೆಯನ್ನು ನೀಡಬೇಕು ಜೊತೆಗೆ ಪದವಿ ತರಗತಿಗಳಿಗೆ ಉಪನ್ಯಾಸಕರ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಮೊದಲು ಆದ್ಯತೆ ನೀಡಬೇಕು ಮತ್ತು ಪಿಹೆಚ್‌ಡಿ ಎನ್‌ಇಟಿ ಹಾಗು ಎಸ್‌ಇಟಿ ಅರ್ಹತೆಯುಳ್ಳ ಉಪನ್ಯಾಸಕರನ್ನು ಅರ್ಹತೆ ಆಧಾರದ ಮೇಲೆ ಖಾಯಂಗೊಳಿಸಬೇಕೆಂದು ಆಗ್ರಹಿಸಿದರು.

ನಂತರ ಉನ್ನತ ಶೀಕ್ಷಣ ಸಚಿವರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೋಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಬಿವಿಪಿ ಕಲಬುರ್ಗಿ ವಿಭಾಗದ ಸಹ ಪ್ರಮುಖ ಡಾ:ಉಪೇಂದ್ರ ನಾಯಕ ಸುಬೇದಾರ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಧನಂಜಯ ಸಿ,ನಾಗರಾಜ ಮಕಾಶಿ, ನಗರ ಅಧ್ಯಕ್ಷ ರಾಜಪ್ಪ ಅಜ್ಜಿಕೊಲ್ಲಿ ನಗರ ಕಾರ್ಯದರ್ಶಿ ಮಲ್ಲಯ್ಯ ದೇವಾಪುರ ಜಿಲ್ಲಾ ಮಾಧ್ಯಮ ಪ್ರಮುಖ ಪರಶುರಾಮ ಬೈಲಕುಂಟಿ ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ ನಗರ ಉಪಾಧ್ಯಕ್ಷ ಹಣಮಂತ ಸಿಂಘೆ ಹಾಸ್ಟೆಲ್ ಪ್ರಮುಖ ಹಣಮಂತ್ರಾಯ ಮಂಜಲಾಪುರ ಭೀಮಣ್ಣ ಚಂದ್ಲಾಪುರ ಬಸವರಾಜ ಪರಮಣ್ಣ ಮಂಗಿಹಾಳ ಶಾಂತು ನಾಯಕ ಸೇರಿದಂತೆ ಅನೇಕರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago