ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ-ಜನ ವಿರೋಧಿ ಕಾನೂನುಗಳನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರ ತಿಳಿಸಿದ್ದಾರೆ.
ನಾಳೆ ನಗರದ ಜಗತ್ ಸರ್ಕಲ್‌ನಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5 ರವರೆಗೆ ಒಂದು ದಿನದ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು ನಾಗರಿಕರು ಭಾಗವಹಿಸಿ ಧರಣಿಯಲ್ಲಿ ಪಾಲಗೊಂಡು ದೇಶದ ರೈತರ ಪರ ನಿಲ್ಲಬೇಕೆಂದು ಎಂದು ಅವರು ಮನವಿ ಮಾಡಿದ್ದಾರೆ.