ಕಲಬುರಗಿ: ಪ್ರಾಯೋಗಿಕ ಪರೀಕ್ಷೆಯಲ್ಲಿ ತನಗೆ ಅನುತ್ತೀರ್ಣಗೊಳಿಸಲಾಗಿದೆ ಎಂದು ನೊಂದು ದಂತ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ನಗರದ ಆದರ್ಶ ನಗರದ ನಿವಾಸಿ ಹಾಗೂ ಪ್ರತಿಷ್ಠಿತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್. ನಿಜಲಿಂಗಪ್ಪ ದಂತ ವೈದ್ಯಕೀಯ ಕಾಲೇಜಿನ ಎಂಡಿಎಸ್‌ನ ಮೂರನೇ ವರ್ಷದ ವಿದ್ಯಾರ್ಥಿ ಅಫಜಲ್ ಬಶೀರ್ (೩೦) ಎಂಬ ವಿದ್ಯಾರ್ಥಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅಫಜಲ್ ಮೂರು ಪುಟಗಳ ಸುದೀರ್ಘ ಪತ್ರವನ್ನು ಬರೆದಿದ್ದಾನೆ.
ತಾನು ಆತ್ಮಹತ್ಯೆ ಮಾಡಿಕೊಳ್ಳಲು ತನ್ನ ಶಿಕ್ಷಕ ಡಾ. ಉಡುಪಿಕೃಷ್ಣ ಎಂ. ಜೋಶಿ ಅವರೇ ಕಾರಣರು ಎಂದು ದೂಷಿಸಿದ್ದಾನೆ. ತಾನು ಯುನೈಟೆಡ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ್ದು, ತನ್ನನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ದುಡಿಸಿಕೊಳ್ಳುವ ದುರುದ್ದೇಶದಿಂದ ಶಿಕ್ಷಕರೇ ನನಗೆ ಪ್ರಾಯೋಗಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದಾರೆ. ಇದರಿಂದ ನನ್ನ ಶಿಕ್ಷಣದೊಂದಿಗೆ ಕೆಲಸವೂ ತಪ್ಪಿದೆ ಎಂದು ಆತ ಆ ಪತ್ರದಲ್ಲಿ ವಿವರಿಸಿದ್ದಾನೆ.
ತಾನು ಯುನೈಟೆಡ್ ಆಸ್ಪತ್ರೆಯಲ್ಲಿ ಸ್ವಂತ ವೆಚ್ಚದಲ್ಲಿ ಕಾರ್ಯನಿರ್ವಹಿಸಿರುವೆ. ಬೇಕಾದರೆ ಅಲ್ಲಿ ದಾಖಲಾತಿಗಳು ಸಿಗುತ್ತವೆ. ನನಗೆ ದುರುದ್ದೇಶಪೂರ್ವಕವಾಗಿಯೇ ಅನುತ್ತೀರ್ಣಗೊಳಿಸಿದ್ದು ಸಹ ಗೊತ್ತಾಗುತ್ತದೆ. ನನ್ನ ಕುರಿತು ನನ್ನ ತಂದೆ ಹಾಗೂ ತಾಯಿ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅಫಜಲ್ ಪತ್ರದಲ್ಲಿ ತಿಳಿಸಿದ್ದಾನೆ. ಈ ಕುರಿತು ಎಂ.ಬಿ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ವಿದ್ಯಾರ್ಥಿ ಈಗ ಬಸವೇಶ್ವರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…