ಬಿಸಿ ಬಿಸಿ ಸುದ್ದಿ

ಕಲಬುರಗಿಗೆ ಹೊಸ ಕೈಗಾರಿಕೆಗಳನ್ನು ತರಲು ಕಾಸಿಯಾ ಪ್ರಯತ್ನ

ಕಲಬುರಗಿ: ಮುಂಬರುವ ದಿನಗಳಲ್ಲಿ ಕಲಬುರಗಿಗೆ ಹೊಸ ಕೈಗಾರಿಕೆಗಳನ್ನು ತರಲು ಪ್ರಯತ್ನಿಸುವುದಾಗಿ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ಅವರು ಭರವಸೆ ನೀಡಿದರು.

ಬುಧವಾರ ನಗರದ ಲುಂಬಿನಿಸ್ ಗ್ರ್ಯಾಂಡ್ ಹೊಟೇಲ್‍ನಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದೊಂದಿಗೆ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ 2020-25 ಹಾಗೂ ಹೂಡಿಕೆ ಅವಕಾಶಗಳ ಕುರಿತು ಕಲಬುರಗಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಆಗಿರುವುದು ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿದೆ. ಹೆಚ್ಚೆಚ್ಚು ಕೈಗಾರಿಕೆಗಳು ಈ ಭಾಗದಲ್ಲಿ ತಲೆ ಎತ್ತಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಲಬುರಗಿ ಜಿಲ್ಲೆಗೆ ನೀಡಿರುವ ಕೈಗಾರಿಕೆಗಳನ್ನು ಬೆಳಗಾವಿ ಹಾಗೂ ಹುಬ್ಬಳ್ಳಿಗೆ ಸ್ಥಳಾಂತರವಾಗದಂತೆ ಇಲ್ಲಿಯೇ ಉಳಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕೊರೋನಾದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಕೈಗಾರಿಕೆಗಳು ಸಮಸ್ಯೆಗೀಡಾಗಿವೆ. ಹೀಗಾಗಿ ಸರ್ಕಾರ ಭೂಮಿ, ವಿದ್ಯುತ್ ಹಾಗೂ ತೆರಿಗೆಯ ಮೇಲೆ ಸಬ್ಸಿಡಿ ನೀಡಿದರೆ ಕೈಗಾರಿಕೆಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗೂ ಸ್ಟಾರ್ಟಪ್ ನವಯುವಕರಿಗೆ ಪೆÇ್ರೀತ್ಸಾಹ ನೀಡಿದರೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲು ಸಹಕಾರಿ ಆಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಲಬುರಗಿಯಲ್ಲಿ ಕೈಗಾರಿಕಾ ನಿವೇಶನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಬ್ಸಿಡಿ ರೂಪದಲ್ಲಿ ಅನುದಾನ ನೀಡಿದರೆ ನಗರದಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆ ಆಗಲಿದೆ ಎಂದು ಅವರು ಹೇಳಿದರು.

ಕೌಶಲ್ಯ ಕಾರ್ಮಿಕರಿಗೆ ತರಬೇತಿ ಜೊತೆಗೆ ಪೆÇ್ರೀತ್ಸಾಹಧನ ನೀಡಿದರೆ ಅವರಿಗೆ ಸಹಾಯಕವಾಗುತ್ತದೆ. ದಾಲಮಿಲ್ ಹಾಗೂ ರೈಸ್‍ಮಿಲ್ ಕೃಷಿ ಆಧಾರಿತ ಕೈಗಾರಿಕೆಗಳು ಆಗಿರುವುದರಿಂದ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಮುಂಬರುವ ಬಜೆಟ್‍ನಲ್ಲಿ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಹಣಕಾಸು ಮೀಸಲಿಡಬೇಕೆಂದು ಅವರು ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷ ಅಮರನಾಥ ಪಾಟೀಲ್, ಕಾಸಿಯಾ ಪ್ರಧಾನ ಕಾರ್ಯದರ್ಶಿ ಎನ್.ಆರ್ ಜಗದೀಶ್, ಜಂಟಿ ಕಾರ್ಯದರ್ಶಿ ಪಿ.ಎನ್. ಜೈಕುಮಾರ ಹಾಗೂ ಖಜಾಂಚಿ ಎಸ್. ಶಂಕರನ್ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago