ಕಲಬುರಗಿ: ದೇಶದಲ್ಲಿ ಬಂಡವಾಳ ಹೂಡಿಕೆಗೆ ಸ್ಪರ್ಧೆ ಏರ್ಪಟ್ಟಿದೆ. ಸಂಪನ್ಮೂಲವನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಿದರೆ ಹೆಚ್ಚು ಉದ್ಯೋಗ ಸೃಷ್ಟಿಸಬಹುದು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಹೆಚ್.ಎಂ. ಶ್ರೀನಿವಾಸ ಅವರು ಹೇಳಿದರು.
ಬುಧವಾರ ನಗರದ ಲುಂಬಿನಿಸ್ ಗ್ರ್ಯಾಂಡ್ ಹೊಟೇಲ್‍ನಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಜಾರಿಗೊಳಿಸಲಾದ ಪರಿಣಾಮಕಾರಿಯಾದ ಸುಧಾರಣೆಗಳ ನಂತರ ಘೋಷಿಸಲಾದ ಈ ಕೈಗಾರಿಕಾ ನೀತಿಯು, ರಾಜ್ಯವು ಉನ್ನತ ಮಟ್ಟದ ಕೈಗಾರಿಕಾ ಕಾರ್ಯಕ್ಷಮತೆ ಶ್ರೇಣಿಯನ್ನು ಸಾಧಿಸಲು ಸಹಾಯಕವಾಗಿದೆ. ವಿಶೇಷವಾಗಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂ.ಎಸ್.ಎಂ.ಇ)ಗಳಿಗೆ ಶೇಕಡ 10 ರಷ್ಟು ಹೂಡಿಕೆ ಉತ್ತೇಜನಾ ಸಹಾಯಧನ ಸಿಗಲಿದೆ. ಕೆ.ಎಸ್.ಎಫ್.ಸಿ. ಸಾಲಗಳಿಗೆ ಬಡ್ಡಿಯನ್ನು ಶೇಕಡ 6 ಕ್ಕೆ ಇಳಿಸುವುದು ಮತ್ತು ಎಂ.ಎಸ್.ಎಂ.ಇ.ಗಳಿಗೆ ಹೆಚ್ಚಿನ ಸಾಲ ಸೌಲಭ್ಯ ದೊರೆಯಲಿದೆ. ಕೆ.ಐ.ಎ.ಡಿ.ಬಿ. ಕೈಗಾರಿಕಾ ಪ್ರದೇಶಗಳಲ್ಲಿ ಎಂ.ಎಸ್.ಎಂ.ಇ. ಗಳಿಗಾಗಿ ಶೇಕಡ 30 ರಷ್ಟು ನಿವೇಶನಗಳ ಮೀಸಲಾತಿ, ವಿದ್ಯುತ್ ತೆರಿಗೆ ಮನ್ನಾ, ಖಾಸಗಿ ವಲಯದಲ್ಲಿ ಕೈಗಾರಿಕಾ ಪಾರ್ಕ್‍ಗಳು, ಟೈರ್-2 ಮತ್ತು ಟೈರ್-3 ನಗರಗಳಲ್ಲಿ ಕೈಗಾರಿಕಾ ಕ್ಲಸ್ಟರ್‍ಗಳ ಸ್ಥಾಪನೆ, ಕಾರ್ಮಿಕರ ಮಿತಿಯನ್ನು ಹೆಚ್ಚಿಸುವ ಸುಧಾರಣೆಗಳು ಹಾಗೂ ಕಾರ್ಖಾನೆಗಳ ಕಾಯ್ದೆಯಡಿ ಪಾಲಿಸಬೇಕಾದ ಅನುಸರಣೆಯಲ್ಲಿ ಪರಿಹಾರದ ಕುರಿತು ಅವರು ವಿವರಿಸಿದರು.
ತಂತ್ರಜ್ಞಾನ ಮತ್ತು ರಫ್ತು ಸಂಬಂಧಿತ ಕೈಗಾರಿಕೆಗಳಿಗೆ ಧನಸಹಾಯ, ಕೈಗಾರಿಕಾ ಉದ್ದೇಶಕ್ಕಾಗಿ ನಗರ ಮತ್ತು ಗ್ರಾಮೀಣ ಕಾನೂನುಗಳ ಸರಳೀಕರಣ, ಹೊಸ ತಂತ್ರಜ್ಞಾನ ಅಳವಡಿಕೆ ಪ್ಯಾಕೇಜ್, ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ತ್ಯಾಜ್ಯಘಟಕ ಸ್ಥಾಪನೆಗೆ ಅನುದಾನ, ಎಲೆಕ್ಟ್ರಿಕಲ್ ಹಾಗೂ ಪ್ಲಾಸ್ಟಿಕ್ ಮರುಬಳಕೆಗೆ ಸರ್ಕಾರ ಅನುದಾನ, ದೇಶಿಯ ವಸ್ತುಗಳು ವಿದೇಶಕ್ಕೆ ರಫ್ತು ಆರ್ಥಿಕತೆ ವೃದ್ಧಿ, ಕಾರ್ಯಕ್ಷಮತೆ ನೋಡಿ ಸಬ್ಸಿಡಿ ಹಾಗೂ ಕರಕುಶಲಕರ್ಮಿಗಳಿಗೆ ವಿಶೇಷ ಸೌಲಭ್ಯ ಈ ನೀತಿಯಲ್ಲಿ ನೀಡಲಾಗಿದೆ ಎಂದು ಹೇಳಿದರು.
ಹೊಸ ಕೈಗಾರಿಕಾ ನೀತಿಯಲ್ಲಿ ಸಾಮಾನ್ಯ ಮತ್ತು ವಿಶೇಷ ಪ್ರವರ್ಗವಾಗಿ ಅನುದಾನ ನೀಡಲಾಗುವುದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರಿಗೆ, ವಿಶೇಷಚೇತನರಿಗೆ, ಮಾಜಿ ಸೈನಿಕರಿಗೆ, ಮಹಿಳೆಯರಿಗೆ ಶೇ. 75 ರಷ್ಟು ಅನುದಾನ ನೀಡಲಾಗುತ್ತಿದೆ. ಸಾರ್ಥಕ ಯೋಜನೆಯು ಅಭಿವೃದ್ಧಿ ಹಂತದಲ್ಲಿ ಇದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು 2020-25ರ ನೀತಿಯಲ್ಲಿ ಇರುವ ಅನೇಕ ಸೌಲಭ್ಯಗಳ ಕುರಿತು ತಿಳಿಸಿದರು.
ಒಟ್ಟಾರೆ 5 ವರ್ಷದಲ್ಲಿ 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಯ ಅವಕಾಶ ದೊರೆಯಲಿದೆ ಎಂದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ್ ವಿ. ರಘೋಜಿ, ಕಾರ್ಯದರ್ಶಿ ಶಶಿಕಾಂತ ಪಾಟೀಲ, ಕಾಸಿಯಾ ನಗರ ಜಂಟಿ ಕಾರ್ಯದರ್ಶಿ ಪಿ.ಎನ್. ಜೈಕುಮಾರ್, ಖಜಾಂಚಿ ಎಸ್. ಶಂಕರನ್, ಕಾಸಿಯಾ ಗ್ರಾಮೀಣಾಭಿವೃದ್ಧಿ ಪ್ಯಾನಲ್ ಚೇರ್ಮನ್ ಭೀಮಾಶಂಕರ ಬಿ. ಪಾಟೀಲ, ಕೌಶಲ್ಯ ಪ್ಯಾನಲ್ ಕಾರ್ಯದರ್ಶಿ ಸುದರ್ಶನ ಸೇರಿ ಜಿಲ್ಲೆಯ ಅನೇಕ ಕೈಗಾರಿಕೆಗಳ ಮಾಲೀಕರು ಹಾಗೂ ಸ್ಟಾರ್ಟಪ್ ಉದ್ದಿಮೆದಾರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…