ಬಿಸಿ ಬಿಸಿ ಸುದ್ದಿ

ವಿದ್ಯುತ್ ವ್ಯತ್ಯಯ ಸರಿಪಡಿಸಲು ಲೋಕ ಜನಶಕ್ತಿ ಮುಖಂಡರ ಮನವಿ

ಸುರಪುರ: ತಾಲೂಕಿನಾದ್ಯಂತ ನಿತ್ಯವು ವಿದ್ಯೂತ್ ಕಡಿತಗೊಳ್ಳುತ್ತಿದ್ದು ಇದರಿಂದ ತಾಲೂಕಿನ ಜನತೆ ಬೇಸತ್ತು ಹೋಗಿದ್ದಾರೆ. ತಾಲೂಕಿನಲ್ಲಿ ಒಂದೇ ಮುಖ್ಯ ವಿತರಣಾ ಕೇಂದ್ರ ಹಾಗು ಒಬ್ಬರೆ ಸಹಾಯಕ ಅಭಿಯಂತರರು ಇಡೀ ತಾಲೂಕನ್ನು ನೋಡಿಕೊಳ್ಳುವುದುರಿಂದ ಎಲ್ಲಕಡೆಗೆ ಒಬ್ಬರೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ತಾಲೂಕಿನ ಜನರು ತೀವ್ರ ವಿದ್ಯೂತ್ ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೆ ಈಗಿರುವ ಎಇಇ ಅನೇಕ ವರ್ಷಗಳಿಂದ ಇಲ್ಲಿಯೇ ಬೀಡುಬಿಟ್ಟಿದ್ದು ಇದರಿಂದಾಗಿ ಅವರು ಜನರ ಸಮಸ್ಯೆಗೆ ಕೇರ್ ಮಾಡುತ್ತಿಲ್ಲ,ಯಾರೇ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ,ಯಾರು ಏನು ಮಾಡುತ್ತಾರೆ ಎಂಬ ನಿರ್ಲಕ್ಯ ಇವರಲ್ಲಿದ್ದು ಜನರು ಸಂಕಷ್ಟ ಪಡುವಂತಾಗಿದೆ.

ಆದ್ದರಿಂದ ಈಗಿರುವ ಎಇಇಯವರನ್ನು ಬೇರೆಡೆಗೆ ವರ್ಗಾಯಿಸಬೇಕು ಹಾಗು ತಾಲೂಕಿನ ನಾಲ್ಕು ಭಾಗದಲ್ಲಿ ಅಂದರೆ ದೇವರಗೋನಾಲ ಪೇಠ ಅಮ್ಮಾಪುರ ದೇವಾಪುರ ಹಾಗು ಖಾನಾಪುರ ಎಸ್.ಹೆಚ್‌ನಲ್ಲಿ ವಿದ್ಯೂತ್ ಉಪ ಕೇಂದ್ರಗಳನ್ನು ಸ್ಥಾಪಿಸಿದರೆ ತಾಲೂಕಿನ ವಿದ್ಯೂತ್ ಸಮಸ್ಯೆ ನಿವಾರಣೆಯಾಗಲಿದೆ,ಇಲ್ಲವಾದಲ್ಲಿ ಗ್ರಾಮೀಣ ಭಾಗದ ಜನರು ಹಾಗು ರೈತರು ವಿದ್ಯೂತ್ ಇಲ್ಲದೆ ಬೆಳೆ ನಷ್ಟಕ್ಕೊಳಗಾಗುತ್ತಾರೆ.

ಆದ್ದರಿಂದ ಈ ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಲೋಕ ಜನಶಕ್ತಿ ಪಕ್ಷ ಆಗ್ರಹಿಸುತ್ತದೆ,ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಇಂಧನ ಸಚಿವರಿಗೆ ಬರೆದ ಮನವಿಯಲ್ಲಿ ಆಗ್ರಹಿಸಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರ ಮೂಲಕ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದುರ್ಗಪ್ಪ ಬಡಿಗೇರ ನಾಗರಾಳ ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago