ಕಲಬುರಗಿ: ಮಾರ್ಚ ಏಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ 2ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯವನ್ನು ಉಚಿತವಾಗಿ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ದ ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ನಾಟೀಕಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ತಮಿಳುನಾಡು ಸರಕಾರ ಅಲ್ಲಿನ ವಿದ್ಯಾರ್ಥಿಗಳಿಗೆ ಪ್ರತಿದಿನ ಉಚಿತವಾಗಿ 2ಜಿಬಿ ಡೇಟಾದೊಂದಿಗೆ ನೆಟ್ ಸೌಲಭ್ಯ ಕಲ್ಪಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿನ ನಮ್ಮ ಎಲ್ಲಾ ವಿಧ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ಒದಗಿಸಬೇಕು ಎಂದು ಅವರು ಮನವಿ ಮಾಡಿದರು.
ಕೋವಿಡ್-19 ರ ಪರಿಣಾಮವಾಗಿ ಬಹುತೇಕ ಖಾಸಗಿ ಹಾಗೂ ಸರಕಾರಿ ಶಾಲೆಗಳ ಆನಲೈನ್ ತರಗತಿಗಳ ಮೊರೆ ಹೋಗಿದ್ದು , ಇದು ಪಾಲಕರಿಗೆ ಹೊರೆಯಾಗಿದೆ. ಇನ್ನೂ ಮುಂದಿನ 6 ತಿಂಗಳು ಕಾಲ ಪ್ರತಿದಿನ 2ಜಿಬಿ ಡೇಟಾ ಉಚಿತವಾಗಿ ನೀಡಿದರೆ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿದೆ ಎಂದರು. ಪ್ರತಿ ವಿದ್ಯಾರ್ಥಿ ನೆಟ್ ಹಾಕಿಸಲು ರೂ.200 ರಿಂದ 300 ರವರೆಗೆ ಖರ್ಚು ಮಾಡುತ್ತಾರೆ.
ತಮಿಳುನಾಡಿನಲ್ಲಿ ಈಗಾಗಲೇ ವಿದ್ಯಾರ್ಥಿಗಳಿಗೆ ಡೇಟಾ ನೆಟ್ ಸೌಲಭ್ಯ ಕಲ್ಪಿಸಿದಂತೆ ನಮ್ಮ ರಾಜ್ಯದಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಈ ವ್ಯವಸ್ಥೆಯ ಸೌಲಭ್ಯವನ್ನು ನೀಡಿದರೆ, ಇಲ್ಲಿನ ಗ್ರಾಮೀಣ ಭಾಗದ ಹಾಗೂ ಹಿಂದುಳಿದ ಪ್ರದೇಶದ ವಿಧ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದು ಶಿಕ್ಷಣ ಕ್ಷೇತ್ರ ಸಂಪೂರ್ಣವಾಗಿ ಆನಲೈನ್ ವಾಗಿದೆ. ಈ ನಿಟ್ಟಿನಲ್ಲಿ ಸರಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಕನಿಷ್ಠ 2ಜಿಬಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಕರವೇ (ಪ್ರವೀಣ್ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ನಾಟೀಕಾರ ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…