ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ನಗರದ ಅನನ್ಯ ಪದವಿ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾಲೇಜಿನ ಅಧ್ಯಕ್ಷೆ ಸುಷ್ಮಾವತಿ ಎಸ್. ಹೂನಗೇಜಿ ಮಾತನಾಡುತ್ತಾ ೧೨ ನೇ ಶತಮಾನದ ವಚನಕಾರ ಬಸವಾದಿ ಶಿವಶರಣರ ಮಹಾಕ್ರಾಂತಿಯಲ್ಲಿ ಹೊರಹೊಮ್ಮಿದ ತನ್ನ ದಿಟ್ಟ ನಡೆ ನುಡಿಯಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ ಅಪರೂಪದ ಶರಣ ಶ್ರೀ ಅಂಬಿಗರ ಚೌಡಯ್ಯನವರು ನಿಷ್ಠುರ ವಚನಗಳ ಮೂಲಕ ಶಿವಶರಣರ ರಿಂದ ಲೇವೀರಗಣಾಚಾರಿ ಎಂದು ಕರೆಯಿಸಿಕೊಂಡವರು ಆ ಮಹಾಪುರುಷರ ಜಯಂತಿಯನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಪುಣ್ಯದ ಫಲವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶರಣಪ್ಪ ಬೀ ಹೂನಗೇಜೀ (ಪೂಜಾರಿ), ಇಂದುಮತಿ ಪಾಟೀಲ್, ರೇಣುಕಾ, ಸುಜಾತ, ಸುಧಾ, ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.